ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪ್ರಕರಣ ವಿಚಾರಣೆಯನ್ನು ನಡೆಸಿರುವ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಸುಮಾರು 33 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಶರ್ಮಿಳಾ ಮಾಂಡ್ರೆ ಅವರನ್ನು ದೋಷಮುಕ್ತಗೊಳಿಸಲಾಗಿದೆ.

ಕೊರೊನಾ ವೈರಸ್ ಸೋಂಕಿನ ಆರ್ಭಟದ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಹೇರಿಕೆ ಮಾಡಲಾಗಿತ್ತು. ಈ ವೇಳೆಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಶರ್ಮಿಳಾ ಮಾಂಡ್ರೆ ಅವರು ಚಲಿಸುತ್ತಿದ್ದ ಐಶಾರಾಮಿ ಕಾರು ಅಪಘಾತಕ್ಕೆ ಒಳಗಾಗಿತ್ತು.

ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯ ಪೊಲೀಸರು, ಸುದೀರ್ಘ ವಿಚಾರಣೆಯನ್ನು ನಡೆಸಿದ್ದಾರೆ. ಇದೀಗ 4ನೇ ಎಸಿಎಂಎಂ ಸಂಚಾರ ವಿಭಾಗದ ನ್ಯಾಯಾಲಯಕ್ಕೆ 33 ಪುಟಗಳ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಕಾರು ಚಾಲಕ ಡಾನ್ ಥಾಮಸ್ನನ್ನು ಆರೋಪಿಯನ್ನಾಗಿ ಪರಿಗಣಿಸಲಾಗಿದೆ.

ಕಾರು ಚಾಲನೆ ಬಾರದಿದ್ದರೂ ಥಾಮಸ್ ಅತಿವೇಗವಾಗಿ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಅಪಘಾತ ನಡೆದ ವೇಳೆಯಲ್ಲಿ ಹಿಂದಿನ ಆಸನದಲ್ಲಿ ಕುಳಿತುಕೊಂಡಿದ್ದ ನಟಿ ಶರ್ವಿುಳಾ ಗಾಯಗೊಂಡಿದ್ದರು. ಹೀಗಾಗಿ ನಟಿಯ ಹೆಸರನ್ನು ಆರೋಪ ಪಟ್ಟಿಯಿಂದ ಕೈಬಿಡಲಾಗಿದೆ.

ಆದರೆ ಕಾರಿನಲ್ಲಿದ್ದಾರೆನ್ನಲಾಗುತ್ತಿದ್ದ ಶಿಫಾ, ಲೋಕೇಶ್ ಕುಮಾರ್ ಮತ್ತು ನಿಖಿಲ್ ಹೆಸರನ್ನೂ ಉಲ್ಲೇಖಿಸಿಲ್ಲ. ಅಪಘಾತದ ಹೇಗೆ ನಡೆದಿದೆ ಎಂಬ ಸಂಗತಿಯನ್ನು ಮಾತ್ರ ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ. ಅಪಘಾತ ಕುರಿತ ಎಫ್ಐಆರ್ನಲ್ಲೂ ಶರ್ವಿುಳಾ ಹೆಸರಿರಲಿಲ್ಲ.