ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಜೊತೆಗೆ ಹಲವು ಸಿನಿಮಾಗಳಿಗೆ ನಿರ್ದೇಶನ ಹಾಗೂ ನಿರ್ಮಾಣ (Shivamma movie) ಹೊಣೆ ಕೂಡ ಹೊತ್ತಿದ್ದಾರೆ. ಕನ್ನಡ ಸಿನಿರಂಗದಲ್ಲಿ ದೊಡ್ಡ ಬಜೆಟ್ ಸಿನಿಮಾಗಳ ಜೊತೆ ಹೊಸಬರ ಸಿನಿಮಾಗಳು ಕೂಡ ರಿಲೀಸ್ ಆಗಿ ಜನ ಮನ್ನಣೆ ಪಡೆದುಕೊಂಡಿದೆ. ಅದರಲ್ಲೂ ಕನ್ನಡದ ಕೆಲವು ಸಣ್ಣ ಬಜೆಟ್ ಸಿನಿಮಾಗಳು ಸಾಗರದಾಚೆಗೆ ಹೋಗಿ ಅಲ್ಲಿನ ಚಿತ್ರೋತ್ಸವಗಳಲ್ಲಿ ಪ್ರಸಿದ್ದಿ ಪಡೆದಿದೆ. ಇದರೊಂದಿಗೆ ಹಲವು ಪ್ರಶಸ್ತಿಗಳನ್ನು ಗೆದ್ದು ಬೀಗಿದೆ. ಇದೀಗ ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಸ್ತುತಪಡಿಸಿದ ಶಿವಮ್ಮ ಸಿನಿಮಾ ಕೂಡ ಜಗತ್ತಿನಾದ್ಯಂತ ವಿವಿಧ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡು ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದು, ಸಿನಿತಂಡಕ್ಕೆ ಎಲ್ಲರೂ ಶುಭ ಕೋರಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ, “ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಹಲವಾರು ಪ್ರಶಸ್ತಿ, ಪ್ರಶಂಸೆಗಳನ್ನು ಗಳಿಸಿದ್ದಲ್ಲದೆ ವಿದೇಶಿಗರ ಪ್ರೀತಿಗೂ ಪಾತ್ರವಾದ ನಮ್ಮ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಸಂಸ್ಥೆಯ ಹೆಮ್ಮೆಯ ‘ಶಿವಮ್ಮ’ ಚಿತ್ರ ತನ್ನ ಗೆಲುವಿನ ಪ್ರಯಾಣವನ್ನು ಮುಂದುವರಿಸಿದೆ. ಸಿನಿಮಾಕ್ಕೆ ನಿಮ್ಮ ಶುಭಹಾರೈಕೆಗಳಿರಲಿ” ಎಂದು ಹಂಚಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಹಲವಾರು ಪ್ರಶಸ್ತಿ, ಪ್ರಶಂಸೆಗಳನ್ನು ಗಳಿಸಿದ್ದಲ್ಲದೆ ವಿದೇಶಿಗರ ಪ್ರೀತಿಗೂ ಪಾತ್ರವಾದ ನಮ್ಮ 'ರಿಷಬ್ ಶೆಟ್ಟಿ ಫಿಲ್ಮ್ಸ್' ಸಂಸ್ಥೆಯ ಹೆಮ್ಮೆಯ 'ಶಿವಮ್ಮ' ಚಿತ್ರ ತನ್ನ ಗೆಲುವಿನ ಪ್ರಯಾಣವನ್ನು ಮುಂದುವರಿಸಿದೆ. ಚಿತ್ರಕ್ಕೆ ನಿಮ್ಮ ಶುಭಹಾರೈಕೆಗಳಿರಲಿ.
— Rishab Shetty (@shetty_rishab) July 13, 2023
Our… pic.twitter.com/KO2XpMhb8U
ಇದನ್ನೂ ಓದಿ : Aura Movie : ಟ್ರೇಲರ್ ನಲ್ಲೇ ಮೋಡಿ ಮಾಡಿ ಹೊಸಬರ ಆರ ಸಿನಿಮಾ ಜುಲೈ 28ರಂದು ರಿಲೀಸ್
ಇದನ್ನೂ ಓದಿ : Let’s Get Married movie : ‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆ ಮಾಡಿದ ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ
ಶಿವಮ್ಮ ಸಿನಿಮಾವನ್ನು ಜೈಶಂಕರ್ ಆರ್ಯರ್ ಅವರು ನಿರ್ದೇಶಿಸಿದ್ದು, ಇದು ಅವರ ಮೊದಲ ನಿರ್ದೇಶನದ ಸಿನಿಮಾವಾಗಿದೆ. ಇದಲ್ಲದೇ ಈ ಚಿತ್ರವೋತ್ಸವದಲ್ಲಿ ಅನೇಕ ಸಿನಿಮಾ ಪ್ರದರ್ಶನ ಕಂಡಿದೆ. ಚೀನಾದಲ್ಲಿ ನಡೆದ ಹೈನಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ನ್ಯೂ ಕರೆಂಟ್ಸ್ ಪುರಸ್ಕಾರ, ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2022, ಯಂಗ್ ಜೂರಿ ಪುರಸ್ಕಾರ, ಫೆಸ್ಟಿವಲ್ ಡೆಸ್ 3 ಕಾಂಟಿನೆಂಟಸ್, ನಾಂಟೆಸ್ 2022, ಅತ್ಯುತ್ತಮ ನಿರ್ದೇಶಕ, ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೀನಾ ಬ್ಲಾಕ್ ಮೂವಿ, ಸ್ವಟ್ಜರ್ಲ್ಯಾಂಡ್ ಫಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಇರಾನ್ ಗೋಥೆಂಬರ್ಗ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ ರಷ್ಯಾ ಇಮೆಜಿನ್ ಇಂಡಿಯಾ, ಸ್ಪೇನ್ ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ, ಕೆನಡ ಇಂಡಿಯನ್ ಪಿಲ್ಮ್ ಫೆಸ್ಟಿವಲ್, ಮೆಲ್ಬೋರ್ನ್ ಅಂಡ್ರಿ ತರ್ಕೋವ್ಸ್ಕಿ ಅಂತರಾಷ್ಟ್ರೀಯ ಚಿತ್ರೋತ್ಸವ ಮುಂತಾದ ಚಿತ್ರೋತ್ಸವಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
Shivamma movie produced by actor Rishabh Shetty received worldwide recognition