ದಕ್ಷಿಣ ಭಾರತದಲ್ಲಿಅತೀ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ನಟ ಯಾರು ಗೊತ್ತಾ

ಸೆಲೆಬ್ರಿಟಿಗಳು ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿರೋದು ಮಾಮೂಲು. ಅದ್ರಲ್ಲೂ ಅತೀ ಹೆಚ್ಚು ಫ್ಯಾನ್ಸ್‌ ಯಾರು ಹೊಂದಿದ್ದಾರೆ ಅನ್ನೋ ಕುತೂಹಲ ಸಹಜವಾಗಿಯೇ ಇರುತ್ತೆ. ಅದ್ರಲ್ಲೂ ದಕ್ಷಿಣ ಭಾರತದಲ್ಲಿಯೇ ಖ್ಯಾತ ತೆಲುಗು ನಟ ಅಲ್ಲು ಅರ್ಜುನ್‌ ಅತೀ ಹೆಚ್ಚು ಫ್ಯಾನ್ಸ್‌ ಫಾಲೋವರ್ಸ್‌ ಹೊಂದಿದ್ದಾರೆ.

ತಮ್ಮ ಸ್ಟೈಲಿಶ್‌ ಲುಕ್‌ ಮೂಲಕವೇ ಅಪಾರ ಅಭಿಮಾನಿಗಳನ್ನು ಹೊಂದಿರುವ ಅಲ್ಲು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ 13 ಮಿಲಿಯನ್ ಅನುಯಾಯಿಗಳಿದ್ದಾರೆ. ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುವ ಟಾಲಿವುಡ್ ನ ಪ್ರತಿಭಾವಂತ ನಟರಾಗಿದ್ದಾರೆ.

ಇದನ್ನೂ ಓದಿ: Deepika padukone: ಬಾಲಿವುಡ್ ನಿಂದ ಹಾಲಿವುಡ್ ಗೆ ಡಿಪ್ಪಿ: ನಟನೆ ಜೊತೆ ನಿರ್ಮಾಣಕ್ಕೂ ಸೈ ಎಂದ ಕನ್ನಡತಿ

ಅಲ್ಲು ಅರ್ಜುನ್ ಅವರಿಗೆ ಬೇರೆ ಬೇರೆ ರಾಜ್ಯಗಳಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ. ಕರ್ನಾಟಕದಲ್ಲಿ ಕೂಡ ಅಲ್ಲು ಅರ್ಜುನ್ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅಲ್ಲು ಅರ್ಜುನ್ ಹೊರತುಪಡಿಸಿ ದಕ್ಷಿಣ ಭಾರತದ ಮತ್ತೊಬ್ಬ ನಟ ವಿಜಯ್ ದೇವರಕೊಂಡ ಇನ್ಸ್ಟಾಗ್ರಾಮ್ ನಲ್ಲಿ 12.9 ಮಿಲಿಯನ್ ಫಾಲೋವರ್ಸ್ ಹೊಂದಿದ್ದು ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರ ಕ್ರಿಸ್ಮಸ್ ಹಬ್ಬದಂದು ತೆರೆ ಮೇಲೆ ಅಬ್ಬರಿಸಲು ಸಜ್ಜಾಗಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: Manvitha kamath: ಹ್ಯಾಪಿಲೀ ಮ್ಯಾರೀಡ್ ಎಂದ ಟಗರು ಪುಟ್ಟಿ: ಸೋಷಿಯಲ್ ಮೀಡಿಯಾದಲ್ಲಿ ಮಾನ್ವಿತಾ ಪೋಸ್ಟ್

(Telugu actor Allu Arjun has the biggest fan following in South India.)

Comments are closed.