ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯ್ (Spandana Vijay Raghavendra) ಬಾರದ ಲೋಕಕ್ಕೆ ಪಯಣಿಸಿ ಒಂದು ದಿನ ಕಳೆದಿದೆ. ಈಗಾಗಲೇ ಥಾಯ್ಲೆಂಡ್‌ನ ಆಸ್ಪತ್ರೆಯಲ್ಲಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆಯನ್ನು ಮುಗಿಸಲಾಗಿದ್ದು, ನಾಳೆ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮಿಸಿದೆ. ಅಲ್ಲದೇ ಬೆಂಗಳೂರಿನಲ್ಲಿಯೇ ಅಂತ್ಯಕ್ರೀಯೆ ನಡೆಸಲು ಸಿದ್ದೆತೆಗಳನ್ನು ಮಾಡಿಕೊಳ್ಳಲಾಗಿದೆ.
ಪ್ರವಾಸಕ್ಕೆ ತೆರಳಿದ ವೇಳೆಯಲ್ಲಿ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಈಗಾಗಲೇ ಮರಣೋತ್ತರ ಕಾರ್ಯವನ್ನು ಮುಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಇನ್ನಷ್ಟೇ ಕೈ ಸೇರಬೇಕಾಗಿದೆ. ಅಲ್ಲದೇ ಪಾರ್ಥಿವ ಶರೀರವನ್ನು ಭಾರತಕ್ಕೆ ಕೆರೆತರಲು ಕಸ್ಟಮ್ಸ್ ನಿಂದ ನಿರಪೇಕ್ಷಣಾ ಪತ್ರ ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನಿನ ತೊಡಕು ನಿವಾರಣೆಯ ಕುರಿತು ಕಾರ್ಯಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಭಾರತೀಯ ರಾಯಭಾರ ಕಚೇರಿ ಈ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುತ್ತಿದೆ.
ನಾಳೆ ಮಧ್ಗಾಹ್ನದ ಹೊತ್ತಿಗೆ ಪಾರ್ಥಿವ ಶರೀರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮಧ್ಯಾಹ್ನ 12 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಮನೆಯಲ್ಲಿ ಅಂತಿಮ ದರ್ಶನವನ್ನು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕೆಲಹೊತ್ತು ಪಾರ್ಥಿವ ಶರೀರದ ಅಂತಿಮ ದರ್ಶನ ನಡೆಸಿದ ಬಳಿಕ ಬೆಂಗಳೂರಿನಲ್ಲಿಯೇ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ : Spandana Vijay Raghavendra : ಸ್ಪಂದನಾ ವಿಜಯ್ ಪಾರ್ಥಿವ ಶರೀರ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಯಾವಾಗ ಬರುತ್ತೆ ?
ಸ್ಪಂದನಾ ಹಾಗೂ ವಿಜಯ್ ರಾಘವೇಂದ್ರ ಅವರು ಸಾಕಷ್ಟು ಅನ್ಯೋನ್ಯವಾಗಿದ್ದರು. ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ನಟ ವಿಜಯ್ ರಾಘವೇಂದ್ರ ಅವರು ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗಳಿಗೆ ಇಬ್ಬರು ಮಕ್ಕಳಿದ್ದರು. ಸ್ಪಂದನಾ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಥಾಯ್ಲಂಡ್, ಹಾಕಾಂಗ್‌ಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆಯಲ್ಲಿಯೇ ಹೃದಯಾಘಾತದಿಂದ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ.
Spandana Vijay Raghavendra: Spandana Vijay’s funeral tomorrow in Bangalore