ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ : ಸಿಎಂ ಬೊಮ್ಮಾಯಿ

ಬೆಂಗಳೂರು : ಕೊರೊನಾದಿಂದ ನಿನಿಮಾ ಜಗತ್ತು ಕೂಡ ಸಾಕಷ್ಟು ತೊಂದರೆಗಳನ್ನು ಅನುಭವಿಸಿದೆ. ಸಿನಿಮಾವನ್ನೇ ನಂಬಿ ಜೀವನ ನಡೆಸುವವರ ಜೀವನ ಕಷ್ಟದ ಸಾಗರದಲ್ಲಿ ಮುಳುಗಿತ್ತು. ಆದರೆ ಈಗ ಕೊರೊನಾ ಪ್ರಕರಣಗಳು ಇಳಿಮುಖ ಆದ ಬಳಿಕ ಎಲ್ಲ ಉದ್ಯಮಗಳು ಸಹಜಸ್ಥಿತಿಗೆ ಮರಳುತ್ತಿವೆ. ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೊವಿಡ್​ ಎರಡನೇ ಅಲೆ ಬಹುತೇಕ ಕಡಿಮೆ ಆಗಿದೆ. ಈ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ.

ಚಿತ್ರಮಂದಿರಕ್ಕೆ ಬರುವವರು ಕೊವಿಡ್​ ಒಂದು ಡೋಸ್​ಪಡೆದಿರುವುದು ಕಡ್ಡಾಯವಾಗಿದೆ. ಈ ಬೆಳವಣಿಗೆಯಿಂದ ಸ್ಟಾರ್​ ಸಿನಿಮಾಗಳು ರಿಲೀಸ್​ಗೆ ರೆಡಿ ಆಗುತ್ತಿವೆ. ಕೊರೊನಾ ಪ್ರಕರಣಗಳು ಇಳಿಮುಖ ಆದ ಬಳಿಕ ಎಲ್ಲ ಉದ್ಯಮಗಳು ಸಹಜಸ್ಥಿತಿಗೆ ಮರಳುತ್ತಿವೆ. ಆದರೆ ಚಿತ್ರೋದ್ಯಮ ಮಾತ್ರ ಸಂಕಷ್ಟದಲ್ಲೇ ಇದೆ. ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಪುಕ್ಸಟ್ಟೆ ಲೈಫು ಸಿನಿಮಾ ನೋಡಿ ನೀನೊಬ್ಬ ಇರಬೇಕಿತ್ತು ಎಂದ ಸ್ಯಾಂಡಲ್ ವುಡ್ ನಿರ್ದೇಶಕರು

ಈ ಪ್ರಮಾಣವನ್ನು ಶೇ.100ಕ್ಕೆ ಹೆಚ್ಚಿಸುವಂತೆ ಕನ್ನಡ ಚಿತ್ರರಂಗದ ನಿರ್ಮಾಪಕರು ಮನವಿ ಮಾಡಿಕೊಂಡಿದ್ದರು. ಈ ಸಂಬಂಧ ‘ಭಜರಂಗಿ 2’ ಚಿತ್ರದ ನಿರ್ಮಾಪಕ ಜಯಣ್ಣ, ಸಲಗ ಸಿನಿಮಾ ನಿರ್ಮಾಪಕ ಕೆ.ಪಿ. ಶ್ರೀಕಾಂತ್​, ಕೋಟಿಗೊಬ್ಬ 3 ಚಿತ್ರಕ್ಕೆ ಬಂಡವಾಳ ಹೂಡಿರುವ ಸೂರಪ್ಪ ಬಾಬು ಸೇರಿದಂತೆ ಹಲವರ ಜೊತೆ ಸಚಿವ ಸುಧಾಕರ್​ ಸಭೆ ನಡೆಸಿದ್ದರು. ಇದಾದ ಬೆನ್ನಲ್ಲೇ ಹೌಸ್​ಫುಲ್​ಗೆ ಅವಕಾಶ ಸಿಕ್ಕಿದೆ. ಇದಕ್ಕೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಿರುವುದು ಎಲ್ಲರಲ್ಲೂ ಸಂತೋಷದ ವಾತಾವರಣ ಮೂಡಿದೆ.

ಇದನ್ನೂ ಓದಿ: Kapil Sharma Show : ಕಪಿಲ್ ಶರ್ಮಾ ಶೋ ಗೆ ಎದುರಾಯ್ತು ಕಂಟಕ : ಶೋ ವಿರುದ್ಧ ಎಫ್ ಐಆರ್ ದಾಖಲು..!

(100 per cent seating capacity in theaters: CM Bommai)

Comments are closed.