Katrina Kaif : ಕತ್ರಿನಾ ಕೈಫ್​ಗೆ ಬೆದರಿಕೆಯೊಡ್ಡಿದ್ದ ಆರೋಪಿ ಬಂಧನ: ಕತ್ರಿನಾರನ್ನು ಮದುವೆಯಾಗೋದು ನನ್ನಾಸೆ ಎಂದ ಆರೋಪಿ

Katrina Kaif  : ಇತ್ತೀಚೆಗಷ್ಟೇ ವಿವಾಹವಾಗಿರುವ ಬಾಲಿವುಡ್​ನ ಸ್ಟಾರ್​ ದಂಪತಿ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್​ಗೆ ಸೋಶಿಯಲ್​ ಮೀಡಿಯಾದ ಮೂಲಕ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಗೆ ಸೋಶಿಯಲ್ ಮೀಡಿಯಾದ ಮೂಲಕ ಅನಾಮಧೇಯ ವ್ಯಕ್ತಿ ಕೊಲೆ ಬೆದರಿಕೆ ಹಾಕುತ್ತಿದ್ದಾನೆ ಎಂದು ನಟ ವಿಕ್ಕಿ ಕೌಶಲ್​ ನೀಡಿದ ದೂರನ್ನು ಆಧರಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮನ್ವಿಂದರ್​ ಸಿಂಗ್​ ಎಂದು ಗುರುತಿಸಲಾಗಿದೆ. ಈತ ನಟಿ ಕತ್ರಿಕಾ ಕೈಫ್​ ಕಟ್ಟಾ ಅಭಿಮಾನಿಯಾಗಿದ್ದಾನೆ ಎನ್ನಲಾಗಿದೆ. ಈತನಿಗೆ ನಟಿ ಕತ್ರಿನಾ ಕೈಫ್​ರನ್ನು ಮದುವೆಯಾಗಬೇಕೆಂದು ಆಸೆ ಇತ್ತು. ಹೀಗಾಗಿಯೇ ಕಳೆದ ಕೆಲವು ತಿಂಗಳಿನಿಂದ ಈತ ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ದಂಪತಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇನ್​ಸ್ಟಾಗ್ರಾಂನಲ್ಲಿ ಕತ್ರಿನಾ ಕೈಫ್​ ಜೊತೆಯಲ್ಲಿ ನಿಂತು ಪೋಸ್​ ಕಾಡುತ್ತಿರುವಂತೆ ಫೋಟೋಗಳನ್ನು ಎಡಿಟ್​ ಮಾಡಿ ಪೋಸ್ಟ್​ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಮುಂಜಾನೆಯಷ್ಟೇ ಮುಂಬೈನ ಸಾಂತಾಕ್ರೂಸ್​ ಠಾಣಾ ಪೊಲೀಸರು ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೆತ್ತಿಕೊಂಡಿದ್ದರು.

ಸ್ವತಃ ನಟ ವಿಕ್ಕಿ ಕೌಶಲ್​ ಮುಂಬೈನ ಸಾಂತಾಕ್ರೂಜ್​ ಪೊಲೀಸ್​ ಠಾಣೆಗೆ ದೂರು ನೀಡಲು ಆಗಮಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳು ನಮಗೆ ಇನ್​ಸ್ಟಾಗ್ರಾಂನಲ್ಲಿ ಬೆದರಿಕೆಯ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ಕೌಶಲ್​ ದೂರಿದ್ದಾರೆ. ಅಲ್ಲದೇ ಈ ವ್ಯಕ್ತಿ ಕತ್ರಿನಾ ಕೈಫ್​ರನ್ನು ಹಿಂಬಾಲಿಸುತ್ತಿದ್ದ ಎಂದು ಕೂಡ ದೂರಿನಲ್ಲಿ ಉಲ್ಲೇಖಿಸಲಾಗಿದೆ.


ಡಿಸೆಂಬರ್ 9 ರಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿರುವ ಐಷಾರಾಮಿ ಸಿಕ್ಸ್ ಸೆನ್ಸ್ ಫೋರ್ಟ್ ಬರ್ವಾರಾದಲ್ಲಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ .ಮದುವೆಗೆ ಆಪ್ತರು ಹಾಗೂ ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ಇದನ್ನು ಓದಿ : Death Threat : ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಗೆ ಕೊಲೆ ಬೆದರಿಕೆ; ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಇದನ್ನೂ ಓದಿ : Rishabh Pant helped Cricket Australia : ರಿಷಭ್ ಪಂತ್ ಕಾರಣದಿಂದ ಕ್ರಿಕೆಟ್ ಆಸ್ಟ್ರೇಲಿಯಾ ಖಜಾನೆಗೆ ಕೋಟಿ ಕೋಟಿ ದುಡ್ಡು.. ಹೇಗೆ ಗೊತ್ತಾ?

Struggling actor who wanted to marry Katrina Kaif arrested for death threat to her, Vicky Kaushal

Comments are closed.