Superstar Rajinikanth : ಆಗಸ್ಟ್ 10ಕ್ಕೆ ಮೂರು ಭಾಷೆಯಲ್ಲಿ ತೆರೆ ಅಪ್ಪಳಿಸಲಿದೆ ‘ಜೈಲರ್’ ಸಿನಿಮಾ

ಸೂಪರ್‌ಸ್ಟಾರ್ ರಜನಿಕಾಂತ್ (Superstar Rajinikanth) ನಟನೆಯ ‘ಜೈಲರ್’ (Jailer movie) ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ತಲೈವ ವೃತ್ತಿ ಬದುಕಿನ ವಿಶೇಷ ಸಿನಿಮಾ ಎಂದರೆ ತಪ್ಪಾಗಲ್ಲ. ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಸಿನಿಮಾ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿ ತೆರೆಗೆ ಅಪ್ಪಳಿಸಲಿದೆ. ಹಾಗಾಗಿ ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಸನ್ ಪಿಕ್ಚರ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಲಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದ್ದು, ಕನ್ನಡ ಸಿನಿರಸಿಕರು ಕೂಡ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಗಲಿದೆ.

ಇದನ್ನೂ ಓದಿ : Exclusive : ಸಪ್ತಪದಿ ತುಳಿದ ವಿಕ್ರಾಂತ್ ರೋಣಾ ನಟಿ ನೀತಾ ಅಶೋಕ್‌

ಇದನ್ನೂ ಓದಿ : Ghost Movie : ನಿರ್ದೇಶಕ ಶ್ರೀನಿ ಹುಟ್ಟುಹಬ್ಬ : ಘೋಸ್ಟ್‌ ಸಿನಿಮಾದ ಬಿಗ್‌ ಅಪ್‌ಡೇಟ್‌ ಕೊಟ್ಟ ಸಿನಿತಂಡ

ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್ ಆಗಿದೆ. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದು‌ ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ‌ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ. ಸ್ಯಾಂಪಲ್ಸ್ ಮೂಲಕ ಭಾರಿ ಕ್ರೇಜ್ ಹೆಚ್ಚಿಸಿರುವ ರಜನಿಕಾಂತ್ ಸಿನಿಮಾ ಆಗಸ್ಟ್ 10ಕ್ಕೆ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

Superstar Rajinikanth: ‘Jailer’ will hit the screens on August 10 in three languages

Comments are closed.