ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಅಭಿಮಾನಿಗಳಿಗೆ ಆಘಾತವನ್ನು ನೀಡಿದೆ. ಸುಶಾಂತ್ ಸಿಂಗ್ ಸಾವಿನ ಬೆನ್ನಲ್ಲೇ ಭಾರತೀಯ ಯೋಧರಿಗೆ ಸುಶಾಂತ್ ಸಿಂಗ್ ರಜಪೂತ್ ಆಹಾರ ಬಡಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸುಶಾಂತ್ ಸರಳತೆಯನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನಲ್ಲೇ ಸುಶಾಂತ್ ಕುರಿತ ಅಪರೂಪದ ಪೋಟೋ ಹಾಗೂ ವಿಡಿಯೋಗಳು ವೈರಲ್ ಆಗಿತ್ತು. ಅಭಿಮಾನಿಗಳು ಹಾಗೂ ಬಾಲಿವುಡ್ ಮಂದಿಗ ಸುಶಾಂತ್ ಸಾವಿನ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಗೆ ಯೋಧರ ಬಗ್ಗೆ ಅಪಾರವಾದ ಗೌರವವನ್ನು ತೋರಿಸುತ್ತಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಸಾವಿನ ಬೆನ್ನಲ್ಲೇ ಹಲವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ದ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 24ರಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.