ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿ ತಿಂಗಳು ಕಳೆದಿದೆ. ಆದರೆ ಸುಶಾಂತ್ ಸಿಂಗ್ ನಟಿಸಿದ್ದ ಕೊನೆಯ ಸಿನಿಮಾ ‘ದಿಲ್ ಬೆಚಾರ’ ಟ್ರೇಲರ್ ಬಿಡುಗಡೆಯಾಗಿದ್ದು ಬಾರೀ ಸದ್ದು ಮಾಡುತ್ತಿದೆ.
ಸುಶಾಂತ್ ಸಿಂಗ್ ರಜಪೂತ್ ತನ್ನ ಮನೆಯಲ್ಲಿಯೇ ಸಾವನ್ನಪ್ಪಿದ್ದರು. ಸುಶಾಂತ್ ಸಾವಿನ ಕುರಿತು ತನಿಖೆ ನಡೆಯುತ್ತಿದೆ. ಇದರ ನಡುವಲ್ಲೇ ಸುಶಾಂತ್ ಅಭಿನಯಿಸಿದ ಕೊನೆಯ ಸಿನಿಮಾ ದಿಲ್ ಬೆಚಾರ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ಚಿತ್ರದ ಟ್ರೇಲರ್ ಈಗಾಗಲೇ ಅಭಿಮಾನಿಗಳಿಗೆ ಇಷ್ಟವಾಗಿದೆ.

ದಿಲ್ ಬೆಚಾರ ಸಿನಿಮಾ ನಟ ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಕೊನೆಯ ಚಿತ್ರವಾದರೆ, ನಾಯಕ ನಟಿ ಸಂಜನಾ ಸಂಘಿಯವರಿಗೆ ಚೊಚ್ಚಲ ಚಿತ್ರವಾಗಿದೆ. ಖ್ಯಾತ ನಿರ್ದೇಶಕ ಮುಖೇಶ್ ಛಾಬ್ರಾ ನಿರ್ದೇಶನವಿದೆ. ಚಿತ್ರದ ಟೈಟಲ್ ಟ್ರ್ಯಾಕ್ ಕೂಡ ಸಿನಿ ರಸಿಕರನ್ನು ಮೋಡಿ ಮಾಡಿದೆ.