ನಟ ಸುಶಾಂತ್ ಸಿಂಗ್ ಪ್ರಕರಣ : ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಸರಕಾರಕ್ಕೆ3 ದಿನದ ಗಡುವು ಕೊಟ್ಟಿದ್ದೇಕೆ ?

0

ನವದೆಹಲಿ : ಬಾಲಿವುಡ್​ ನಟ ಸುಶಾಂತ್​ ಸಿಂಗ್ ರಜಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವುದ ಪಡೆದುಕೊಳ್ಳುತ್ತಿದೆ. ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಸಾಕ್ಷ್ಯಗಳನ್ನು 3 ದಿನಗಳ ಒಳಗೆ ಹಾಜರುಪಡಿಸುವಂತೆ ಮಹಾರಾಷ್ಟ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಗಡುವು ನೀಡಿದೆ.

ಸುಶಾಂತ್ ಸಿಂಗ್ ಪ್ರಕರಣ ದಿನ ಕಳೆದಂತೆ ಕಗ್ಗಂಟ್ಟಾಗುತ್ತಿದೆ. ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಸುತ್ತ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ರೆ, ಇನ್ನೊಂದೆಡೆ ಸಾವಿನ ಕಾರಣಗಳ ಕುರಿತು ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಸಿಬಿಐ ಪ್ರಕರಣದ ವಿಚಾರಣೆಯನ್ನು ಚುರುಕುಗೊಳಿಸಿದ್ದು, ಸುಶಾಂತ್​ ಸಿಂಗ್​ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಮುಂದಿನ ಮೂರು ದಿನದೊಳಗೆ ಹಾಜರುಪಡಿಸುವಂತೆ ನ್ಯಾಯಮೂರ್ತಿ ಹೃಷಿಕೇಶ್​ ರಾಯ್​ ಅವರಿದ್ದ ಏಕಸದಸ್ಯ ಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶಿಸಿದೆ.

ಜತೆಗೆ ಪ್ರಕರಣವನ್ನು ಬಿಹಾರ ಪೊಲೀಸರಿಂದ ಮುಂಬೈ ಪೊಲೀಸರಿಗೆ ವರ್ಗಾಯಿಸಬೇಕೆಂದು ಕೋರಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಮನವಿಯನ್ನು ಆಲಿಸಿದ್ದರಿಂದ ತನಿಖೆಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ದಾಖಲಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ಆದರೆ ಪ್ರಕರಣಕ್ಕೆ ಸಂಬಂದಿಸಿದಂತೆ ರಿಯಾ ಚಕ್ರವರ್ತಿಗೆ ಯಾವುದೇ ರೀತಿಯಲ್ಲಿ ರಕ್ಷಣೆ ನೀಡಲು ಸಾಧ್ಯವಿಲ್ಲವೆಂದು ಸುಪ್ರೀಂ ಹೇಳಿದೆ. ಅಲ್ಲದೇ ಮುಂದಿನ ವಾರ ಈ ವಿಷಯವನ್ನು ಮತ್ತೆ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ನಿರ್ಧರಿಸಿದೆ.

ಮುಂಬೈ ಪೊಲೀಸರು ಸಾಕ್ಷ್ಯಗಳನ್ನು ನಾಶಪಡಿಸುವ ಬಗ್ಗೆ ಸುಶಾಂತ್​ ಕುಟುಂಬವು ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಆ ಬಗ್ಗೆಯೂ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನ್ಯಾಯಮೂರ್ತಿ ಹೃಷಿಕೇಶ್​ ರಾಯ್ ಭರವಸೆ ನೀಡಿದ್ದಾರೆ. ಅದೇ ರೀತಿ ಪ್ರಕರಣದ ತನಿಖೆಗೆಂದು ಬಂದಿರುವ ಪಾಟ್ನಾದ ಐಪಿಎಸ್​ ಅಧಿಕಾರಿಯನ್ನು ಮಹಾರಾಷ್ಟ್ರ ಸರ್ಕಾರ ಕ್ವಾರಂಟೈನ್​ ಮಾಡಿದೆ.

ಸರ್ಕಾರದ ಈ ನಡೆಯನ್ನೂ ಪ್ರಶ್ನಿಸಿರುವ ಸುಪ್ರಿಂ, ಪ್ರಕರಣದ ಮೇಲೆ ಎಲ್ಲರ ದೃಷ್ಟಿ ನೆಟ್ಟಿರುವುದರಿಂದ ಇಂತಹ ಕ್ರಮಗಳು ಮತ್ತಷ್ಟು ಅನುಮಾನಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ.

Leave A Reply

Your email address will not be published.