ಸುಶಾಂತ್ ಸಿಂಗ್ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿಗೆ ಬಿಗ್ ಟ್ವಿಸ್ಟ್ !

0

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಸಾವು ಇದೀಗ ತಿರುವು ಪಡೆದುಕೊಂಡಿದೆ. ಮರಣೋತ್ತರ ಪರೀಕ್ಷೆಯ ವರದಿ ಪೊಲೀಸ್ ಕೈ ಸೇರಿದ್ದು, ಆಕೆಯ ತಲೆಯಲ್ಲಿ ಗಾಯದ ಗುರುತುಗಳು ಪತ್ತೆಯಾಗಿರುವ ಕುರಿತು ವರದಿಯಾಗಿದೆ.

ಜೂನ್ 9ರಂದು ಮುಂಜಾನೆ 2 ಗಂಟೆಯ ಸುಮಾರಿಗೆ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕಟ್ಟಡ 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದರು. ಘಟನೆಗೆ ಸಂಬಂಧಿಸಿದಂತೆ ಜೂಲ್ 11ರಂದು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿತ್ತು. ಆದರೆ ಎರಡು ದಿನಗಳ ವಿಳಂಭವಾಗಿ ಮರಣೋತ್ತರ ಪರೀಕ್ಷೆ ನಡೆಸಿರುವುದು ವಿವಾದಕ್ಕೆ ಕಾರಣವಾಗಿದೆ.

ಇನ್ನೊಂದೆಡೆ ದಿಶಾ ಸಾಲಿಯಾನ್ ಮರಣೋತ್ತರ ವರದಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಮುಖವಾಗಿ ದಿಶಾ ಸಾಲಿಯಾನ್ ತಲೆಯಲ್ಲಿ ಗಾಯದ ಗುರುತುಗಳಾಗಿದ್ರೆ, ಮೈಯಲ್ಲಿ ಅಸ್ವಾಭಾವಿಕ ಗುರುತುಗಳು ಪತ್ತೆಯಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.

ದಿಶಾ ಸಾಲಿಯಾನ್ ಸಾವನ್ನಪ್ಪಿದ್ದ ಬೆನ್ನಲ್ಲೇ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿರುವುದು ಬಾಲಿವುಡ್ ಅಂಗಳದಲ್ಲಿ ಬಿರುಗಾಳಿಯನ್ನೇ ಬೀಸಿದೆ. ಮಾತ್ರವಲ್ಲ ಸುಶಾಂತ್ ಸಿಂಗ್ ಸಾವು ಹಾಗೂ ದಿಶಾ ಸಾಲಿಯಾನ್ ಸಾವಿಗೂ ತಳುಕು ಹಾಕಲಾಗುತ್ತಿದೆ.

ಸುಶಾಂತ್ ಸಿಂಗ್ ಸಾವಿನ ಬಗ್ಗೆಯೇ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದ್ದು, ಪ್ರಕರಣ ಇದೀಗ ಸುಪ್ರೀಂ ಕೊರ್ಟ್ ಅಂಗಳದಲ್ಲಿದೆ. ಈ ನಡುವಲ್ಲೇ ದಿಶಾ ಸಾಲಿಯಾನ್ ಮರಣೋತ್ತರ ಪರೀಕ್ಷೆಯ ಅನುಮಾನಗಳನ್ನು ಹುಟ್ಟುಹಾಕಿದೆ.

Leave A Reply

Your email address will not be published.