ವಾಸವಿ ವೆಂಚರ್ಸ್ ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ ಎರಡನೇ ವಾರದಿಂದ ‘ಟೆಲಿವಿಷನ್ ಕ್ರಿಕೆಟ್ ಲೀಗ್’ (television cricket league) ನಡೆಯಲಿದ್ದು, ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ. ಟಿಸಿಎಲ್ ನಲ್ಲಿ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ತೊಡಗಿವೆ.

ಈ ಪಂದ್ಯಾವಳಿಯಲ್ಲಿ ಕ್ರೇಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೈಕರ್ ಎಂಬ 6 ತಂಡಗಳಿರಲಿದ್ದು, ಕಿರುತರೆ ನಟ- ನಟಿಯರು ಭಾಗವಹಿಸಲಿದ್ದಾರೆ.

ದೀಪಕ್ ಹಾಗೂ ಮಂಜೇಶ್ ಸಾರಥ್ಯದಲ್ಲಿ ನಡೆಯುತ್ತಿರುವ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ ಬರೋಬ್ಬರಿ 102 ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ. ಈಗಾಗಲೇ ಎರಡು ಸೀಸನ್ಸ್ ಯಶಸ್ವಿಯಾಗಿ ಪೂರೈಸಿರುವ ಟಿಸಿಎಲ್, ಮೂರನೇ ಸೀಸನ್ ಪಂದ್ಯಾವಳಿಗೆ ಸಜ್ಜಾಗಿದೆ. ಈ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಸ್ಟರ್ ಆನಂದ್, ಬಿಗ್ ಬಾಸ್ ಮಂಜು ಪಾವಗಡ, ಸಂಸ್ಥಾಪಕ ದೀಪಕ್, ಸಹ ಸಂಸ್ಥಾಪಕರಾದ ಮಂಜೇಶ್ ಮತ್ತು ವೈ.ವಿ.ಕಾರ್ತಿಕ್ ಸೇರಿದಂತೆ ಹಲವು ಕಿರುತೆರೆ ಕಲಾವಿದರು ಭಾಗಿಯಾಗಿದ್ದರು.

ಕಿರುತೆರೆ ಕಲಾವಿದರೆಲ್ಲರೂ ಸೇರುವುದೇ ಒಂದು ಹಬ್ಬ. ಇಂತಹ ಹಬ್ಬಕ್ಕೆ ಟೆಲಿವಿಷನ್ ಕ್ರಿಕೆಟ್ ಲೀಗ್ ಸಜ್ಜಾಗಿದೆ. ಬರೋ ಡಿಸೆಂಬರ್ ಎರಡನೇ ವಾರದಿಂದ ಕಿರುತೆರೆ ಕಲಾವಿದರ ಕ್ರಿಕೆಟ್ ಹಂಗಾಮ ಶುರುವಾಗಲಿದೆ.
ಇದನ್ನೂ ಓದಿ : ಮಲೆನಾಡ ಭೂಗತ ಲೋಕವನ್ನು ಅನಾವರಣಗೊಳಿಸಿದ “ಕಾರ್ಗಲ್ ನೈಟ್ಸ್”
ಇದನ್ನೂ ಓದಿ : ಬಾಲಿವುಡ್‌ಗೆ ಎಂಟ್ರಿ ಕೊಟ್ಟ ರವಿ ಬಸ್ರೂರು : ಸಲ್ಮಾನ್ ಖಾನ್ ಸಿನಿಮಾಕ್ಕೆ ಬಸ್ರೂರು ಮ್ಯೂಸಿಕ್
( Kannada Television Artists Cricket Tournament in December )