ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್, ಆಯಾನ ಕಾಣಿಸಿಕೊಂಡಿದ್ದು, ಜೊತೆಗೆ ದೂರದರ್ಶನವಿರುವ ಪೋಸ್ಟರ್ (Prithvi Amber starrer Doordarshan) ಸಿನಿಮಾ ಮೇಲಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಪೋಸ್ಟರ್ ರಿಲೀಸ್ ಮಾಡಿದ ಚಿತ್ರತಂಡ ಮಾಧ್ಯಮದ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ, 1980ರ ಕಾಲಘಟ್ಟದಲ್ಲಿ ನಡೆಯುವ ಸಬ್ಜೆಕ್ಟ್.. ನಾವು ನಮ್ಮ ಹಿರಿಯರ ಜೊತೆ ಅನುಭವಿಸಿ, ಕಳೆದು ಹೋದ, ನಾವು ನೋಡಿರುವ, ಕೇಳಿರುವ ಮಾಹಿತಿ ಕಲೆ ಹಾಕಿ ಕಥೆಯನ್ನು ಕಟ್ಟಿಕೊಡಲಾಗಿದೆ. ಒಂದು ಟಿವಿ ಸುತ್ತ ಕಥೆ ನಡೆಯುತ್ತದೆ. ಪೃಥ್ವಿ, ಉಗ್ರಂ ಮಂಜು ಹೀಗೆ ಪ್ರತಿಯೊಬ್ಬರನ್ನು ನೀವು ಬೇರೆ ರೀತಿ ನೋಡಬಹುದು. 1980 ಕಾಲಘಟ್ಟ ಅಂದ್ರೆ ರೆಟ್ರೋ ಅಂದುಕೊಳ್ತಾರೆ. ನಾವು ರಿಯಲಿಸ್ಟಿಕ್ ಆಗಿ, ಅದೇ ರೀತಿ ಮ್ಯಾನರಿಸಂ ದಾಟಿಯಲ್ಲಿ ಕಟ್ಟಿಕೊಡಲಾಗಿದೆ ಎಂದು ತಿಳಿಸಿದರು.

ನಾಯಕ ಪೃಥ್ವಿ ಅಂಬರ್ ಮಾತನಾಡಿ, ಈ ಸಿನಿಮಾ ನನಗೆ ಬಹಳ ಕನೆಕ್ಟ್ ಆಗಿದೆ. ನಾನು ಹುಟ್ಟಿದ್ದು 88ರಲ್ಲಿ. ನನ್ನ ಪೀಳಿಕೆಗೆಯಲ್ಲಿ ಪ್ರೀ-ಟೆಕ್ನಾಲಜಿ ಹಾಗೂ ಟೆಕ್ನಾಲಜಿ ಎರಡನ್ನೂ ನೋಡಿದ್ದೇನೆ. ನಾನು ಹಳ್ಳಿಯಲ್ಲಿ ಹುಟ್ಟಿದವನು. ನಮ್ಮ ಮನೆಗೆ ಟಿವಿ ಬರುವ ಮೊದಲು ಬೇರೆಯವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದೆವು. ಆ ಬಳಿಕ ನಮ್ಮ ಮನೆಗೆ ಕಲರ್ ಟಿವಿ ಬಂತು. ಆ ದಿನಗಳು ನನಗೆ ಬಹಳ ಕಾಡಿದವು. ಸುಕೇಶ್ ಸರ್ ಕಥೆ ಹೇಳಿದಾಗ ನಮ್ಮೂರ ಕಥೆ ಕೇಳಿದಾಗೇ ಆಯ್ತು. ಈ ಸಿನಿಮಾ ಮಾಡಲೇಬೇಕು ಎಂದು ಮಾಡಿದ್ದೇನೆ. 80ರ ದಶಕವನ್ನು ತುಂಬಾ ಚೆನ್ನಾಗಿ ಕಟ್ಟಿಕೊಟ್ಟಿದ್ದೇವೆ ಎಂದರು.

ಇದನ್ನೂ ಓದಿ : Aishwarya Rai Pregnant : 2ನೇ ಮಗುವಿಗೆ ತಾಯಿಯಾಗ್ತಿದ್ದಾರಾ ಐಶ್ವರ್ಯಾ ರೈ ಬಚ್ಛನ್ : ಅನುಮಾನ ಹುಟ್ಟಿಸಿದ ವೈರಲ್ ವಿಡಿಯೋ
ಇದನ್ನೂ ಓದಿ : yash movie : ಬಾಲಿವುಡ್ನಲ್ಲಿ ರಿಮೇಕ್ ಆಗಲಿದೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಈ ಸಿನಿಮಾ
ಇದನ್ನೂ ಓದಿ : Kareena Kapoors : ಮೂರನೇ ಬಾರಿಗೆ ತಾಯಿಯಾಗ್ತಿದ್ದಾರಾ ಕರೀನಾ ಕಪೂರ್ ಖಾನ್ : ಹೀಗಿತ್ತು ನಟಿಯ ಉತ್ತರ
ಇದನ್ನೂ ಓದಿ : kiccha sudeep new venture : ಹೋಟೆಲ್ ಉದ್ಯಮದತ್ತ ಮುಖ ಮಾಡಿದ ಕಿಚ್ಚ ಸುದೀಪ : ಕಾಫಿ & ಬನ್ಸ್ ಸ್ಥಾಪನೆ
The first poster of Prithvi Amber starrer Doordarshan Movie