ಮಂಗಳವಾರ, ಏಪ್ರಿಲ್ 29, 2025
HomeCinemaVaamana Movie : ವಾಮನ ಸಿನಿಮಾದ ಎರಡನೇ ಹಾಡು ರಿಲೀಸ್ ಮಾಡಿದ ಯಂಗ್ ರೆಬಲ್ ಸ್ಟಾರ್

Vaamana Movie : ವಾಮನ ಸಿನಿಮಾದ ಎರಡನೇ ಹಾಡು ರಿಲೀಸ್ ಮಾಡಿದ ಯಂಗ್ ರೆಬಲ್ ಸ್ಟಾರ್

- Advertisement -

ಸ್ಯಾಂಡಲ್‌ವುಡ್‌ ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ (Vaamana Movie) ಎರಡನೇ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದ ವಾ..ವಾ..ವಾ..ವಾಮನ ಮಾಸ್ ನಂಬರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ವಾಮನ ಅಂಗಳದಿಂದ ಮುದ್ದು ರಾಕ್ಷಸಿ ಎಂಬ ರೋಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಹಾಡಿಗೆ ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದು, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಕಂಠ ಕುಣಿಸಿದ್ದಾರೆ. ಮುದ್ದು ರಾಕ್ಷಸಿ ಹಾಡಿಗೆ ಧನ್ವೀರ್ ಹಾಗೂ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ.

ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ “ಚೇತನ್‌ ಗೌಡ” ಅದ್ಧೂರಿಯಾಗಿ ನಿರ್ಮಿಸಿರುವ ವಾಮನ ಸಿನಿಮಾವನ್ನು ಯುವ ನಿರ್ದೇಶಕ “ಶಂಕರ್‌ ರಾಮನ್‌” ರಚಿಸಿ ನಿರ್ದೇಶಿಸಿದ್ದಾರೆ. ಬೆಂಗಳೂರಿನ ಮಂತ್ರಿ ಮಾಲ್ ನಲ್ಲಿ ಮುದ್ದು ರಾಕ್ಷಸಿ ಮೆಲೋಡಿ ಹಾಡನ್ನು ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ರಿಲೀಸ್ ಮಾಡಿ ಗೆಳೆಯನ ಸಿನಿಮಾಕ್ಕೆ ಸಾಥ್ ನೀಡಿದ್ದಾರೆ.

ಅಭಿಷೇಕ್ ಅಂಬರೀಷ್, ನಾನು ಈಗಷ್ಟೇ ಮುದ್ದು ರಾಕ್ಷಸಿ ಹಾಡು ನೋಡಿದೆ. ಒಂದು ಸಾಂಗ್ ಹಿಟ್ ಆಗಬೇಕು ಅಂದರೆ ಅದರ ಕ್ರೆಡಿಟ್ ಹೀರೋಗೂ ಅಲ್ಲ ಹೀರೋಯಿನ್ ಗೂ ಅಲ್ಲ. ಮ್ಯೂಸಿಕ್ ಡೈರೆಕ್ಟರ್, ಲಿರಿಕ್ಸಿಸ್ಟ್‌ಗೆ. ಅವರ ಎಫರ್ಟ್ ಜಾಸ್ತಿ ಇರುತ್ತದೆ. ನಮ್ಮ ಗೆಳೆಯ ಧನ್ವೀರ್ ಇಷ್ಟು ಚೆನ್ನಾಗಿ ರೋಮ್ಯಾನ್ಸ್ ಮಾಡ್ತಾನೆ ಗೊತ್ತಿರಲಿಲ್ಲ. ಬೈ ಟು ಲವ್ ಸಿನಿಮಾದಲ್ಲಿ ಸ್ವಲ್ಪ ನೋಡಿದ್ದೇವು. ಈಗ ವಾಮನ ಮುಖಾಂತರ ಕಂಪ್ಲೀಟ್ ಕಮರ್ಷಿಯಲ್ ಪ್ಯಾಕೇಜ್, ಕ್ಯೂಟ್ ಲವರ್ ಬಾಯ್ ರೀತಿ ಕಾಣಿಸುತ್ತಿದ್ದಾನೆ ಎಂದರು.

ಧ್ವನೀರ್ ಗೌಡ ಮಾತನಾಡಿ, ಒಂದೇ ಒಂದು ಫೋನ್ ಕಾಲ್ ಗೆ ಬಂದು ಮುದ್ದು ರಾಕ್ಷಸಿ ಹಾಡನ್ನು ಅಭಿಷೇಕ್ ಅಂಬರೀಶ್ ಅವರು ಲಾಂಚ್ ಮಾಡಿಕೊಟ್ಟಿದ್ದಾರೆ. ಭೂಷಣ್ ಮಾಸ್ಟರ್ ಕೊರಿಯೋಗ್ರಫಿಗೆ ಹೆಜ್ಜೆ ಹಾಕಿದ್ದೇನೆ ಎಂದರು. ವಾಮನ ನಿರ್ಮಾಪಕ ಚೇತನ್ ಗೌಡ ಮಾತನಾಡಿ, ಎಲ್ಲರಿಗೂ ಧನ್ಯವಾದ..ಈ ಸಮಾರಂಭವನ್ನು ಇಷ್ಟು ಯಶಸ್ವಿಯಾಗಿ ನಡೆಸಿಕೊಟ್ಟಿದ್ದೀರಾ. ನಾನು ಮೊದಲ ಸಾಂಗ್ ಬಿಡುಗಡೆ ಟೈಮ್ ನಲ್ಲಿ ಸಿನಿಮಾ ಬಗ್ಗೆ ಎಲ್ಲವನ್ನೂ ಹೇಳಿದ್ದೇನೆ. ಈ ಹಾಡನ್ನು ನೋಡಿ ಸಪೋರ್ಟ್ ಮಾಡಿ. ಕನ್ನಡ ಸಿನಿಮಾಗಳನ್ನು ನೋಡಿ ಕನ್ನಡ ಸಿನಿರಂಗ ಬೆಳೆಸಿ ಎಂದರು.

ನಿರ್ದೇಶಕ ಶಂಕರ್ ರಾಮನ್ ಮಾತನಾಡಿ, ಮೊದಲ ಹಾಡಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಈ ಸಾಂಗ್ ನಿಮಗೆ ಡೆಡಿಕೇಟ್ ಗೆ ಮಾಡುತ್ತಿದ್ದೇವೆ. ಅಜನೀಶ್ ಲೋಕನಾಥ್ ಸಂಗೀತ, ವಿ ನಾಗೇಂದ್ರ ಪ್ರಸಾದ್ ಮುದ್ದಾದ ಸಾಹಿತ್ಯ, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಧ್ವನಿ ಕೂಡಿಸಿದ್ದು, ಭೂಷಣ್ ಮಾಸ್ಟರ್ ಕೊರಿಯೋಗ್ರಫ್ ಮಾಡಿದ್ದಾರೆ. ಮನೆಗೆ ಹೋಗ್ತಾ ನೀವು ಮುದ್ದು ಮುದ್ದು ರಾಕ್ಷಸಿ ಹಾಡುತ್ತಾ ಹೋಗಿ ಎಂದರು. ಇದನ್ನೂ ಓದಿ : Kagadha movie : ಬಾಲನಟಿ ಅಂಕಿತಾ-ಆದಿತ್ಯ ಚೊಚ್ಚಲ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ಲವ್ ಮಾಕ್ಟೇಲ್ ಜೋಡಿ

ವಾಮನ ಸಿನಿಮಾದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದು, ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆಆರ್ ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಭೂಷಣ್‌ ಮುಂತಾದವು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಸಿನಿಮಾಕ್ಕಿದೆ.

Vaamana Movie: The second song of Vaamana movie was released by Young Rebel Star

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular