Veera Kambal movie : “ವೀರ ಕಂಬಳ” ಸಿನಿಮಾಕ್ಕೆ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ : ಪೋಟೋ ಸಖತ್‌ ವೈರಲ್

ಸ್ವತಃ ಜೈನರಾಗಿ ಹಿಂದೂ ದೇವಸ್ಥಾನದ ಧರ್ಮದರ್ಶಿಯಾಗಿ ಕಾರ್ಯ ನಿರ್ವಹಿಸುವ ಡಾ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಕ್ಷೇತ್ರಕ್ಕೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರ ಎಂದು ಹೆಸರು ಬರುವಂತೆ ಮಾಡಿದ್ದಾರೆ. ಇದೀಗ ಧರ್ಮದರ್ಶಿಯಾದ ಡಾ. ವೀರೇಂದ್ರ ಹೆಗ್ಗಡೆಯವರು ಬಣ್ಣದ ಲೋಕದಲ್ಲಿ (Veera Kambal movie) ಕಾಣಿಸಿಕೊಳ್ಳಲಿದ್ದಾರೆ. ಎಸ್‌.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ತುಳುನಾಡಿನ ಹೆಮ್ಮೆಯ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿ ‘ವೀರ ಕಂಬಳ’ ಸಿನಿಮಾ ತೆರೆಗೆ ಬರಲಿದೆ. ಇನ್ನೂ ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಸಿನಿಮಾ ಮೂಡಿ ಬರ್ತಿದೆ. 7 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿನಿಮಾದ ಕಥೆ, ಚಿತ್ರಕಥೆ ಹೆಣೆಯಲಾಗಿದೆ. ಆಗೊಮ್ಮೆ ಈಗೊಮ್ಮೆ ಕನ್ನಡ ಸಿನಿಮಾಗಳಲ್ಲಿ ಸಣ್ಣದಾಗಿ ಕಂಬಳ ಕ್ರೀಡೆಯನ್ನು ತೋರಿಸಲಾಗುತ್ತಿತ್ತು. ಇತ್ತೀಚೆಗೆ ‘ಕಾಂತಾರ’ ಸಿನಿಮಾದಲ್ಲೂ ಕಂಬಳ ಕ್ರೀಡೆಯ ಕಾಣಿಕೊಂಡಿರುತ್ತದೆ.

“ವೀರ ಕಂಬಳ” ಸಿನಿಮಾಕ್ಕೆ ಅರುಣ್ ರೈ ತೋಡಾರ್ ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚಿ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಅವರು ಮೇಕಪ್ ಹಾಕಿಕೊಳ್ಳುತ್ತಿರುವ ಫೋಟೊ ವೈರಲ್ ಆಗುತ್ತಿದೆ. ತುಳುನಾಡಿನ ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ : Actor Kishore : “ಕಾಂತಾರ”ದ ದೈವ ಅವಮಾನಿಸಿದ ಯುವಕ ರಕ್ತಕಾರಿ ಸಾವು : ನಟ ಕಿಶೋರ್ ಹೇಳಿದ್ದೇನು ?

ಇದನ್ನೂ ಓದಿ : Real Star Upendra : ‘ಯುಐ’ ಸಿನಿಮಾದ ತೆರೆ ಹಿಂದಿನ ವಿಡಿಯೋ ಹಂಚಿಕೊಂಡ ರಿಯಲ್‌ ಸ್ಟಾರ್‌ ಉಪೇಂದ್ರ

ಇದನ್ನೂ ಓದಿ : KD Movie : ಆ್ಯಕ್ಷನ್ ಪ್ರಿನ್ಸ್ “ಕೆಡಿ” ಸಿನಿಮಾದ ಕ್ರೇಜ್ ಹೆಚ್ಚಿಸಿದ ಪ್ರೇಮ್

ಕಂಬಳದ ಕೋಣ ಓಡಿಸುವುದರಲ್ಲಿ ಪರಿಣಿತರಾಗಿರುವ ಶ್ರೀನಿವಾಸ್ ಗೌಡ ಹಾಗೂ ರಂಗಭೂಮಿ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳದ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದಿತ್ಯಾ, ರಾಧಿಕಾ ಚೇತನ್, ಭೋಜರಾಜ್, ನವೀನ್ ಪಡೀಲ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. “ವೀರ ಕಂಬಳ” ಸಿನಿಮಾದ ಕೊನೆ ಹಂತದ ಚಿತ್ರೀಕರಣ ನಡೆಯುತ್ತಿದೆ. ವೀರ ಕಂಬಳ ಸಿನಿಮಾಕ್ಕೆ ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ ನೀಡಿದ್ದಾರೆ, ಇನ್ನೂ ಈ ಸಿನಿಮಾಕ್ಕೆ ಗಿರಿ ಛಾಯಾಗ್ರಹಣ ಮಾಡಿದ್ದಾರೆ. ತುಳುನಾಡಿನ ಭಾಷೆ, ಸಂಸ್ಕೃತಿ ಸೊಗಡನ್ನು ಈ ಸಿನಿಮಾ ಮೂಲಕ ಜಗತ್ತಿಗೆ ಪಸರಿಸುವಂತೆ ಮಾಡಲಾಗುತ್ತಿದೆ. ವಿಜಯ್ ಕುಮಾರ್ ಕಿಡಿಯಾಲ್ ಬೈಲ್ ಸಂಭಾಷಣೆ ಬರೆದಿದ್ದಾರೆ. ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರುವ ಸಿನಿತಂಡ ಸಜ್ಜಾಗಿದೆ.

Veera Kambal movie was painted by Dr. Virendra Heggade: The photo went viral

Comments are closed.