ನನಗೆ ಕೊರೊನಾ ಬಂದಿಲ್ಲ, ವದಂತಿಗಳನ್ನು ನಂಬಬೇಡಿ: ವಿಜಯಲಕ್ಷ್ಮಿ ದರ್ಶನ್

0

ಬೆಂಗಳೂರು : ನಾನು ಚೆನ್ನಾಗಿಯೇ ಇದ್ದೇನೆ. ನನಗೆ ಕೊರೊನಾ ಬಂದಿದೆ ಅನ್ನುವ ವಂದತಿ ಸುಳ್ಳು. ಯಾವುದೇ ವಂದತಿಗಳನ್ನೂ ನಂಬಬೇಡಿ ಅಂತಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೇಳಿದ್ದಾರೆ.

ದರ್ಶನ್ ಪತ್ನಿ ವಾಸವಿರುವ ಹೊಸಕೆರೆಹಳ್ಳಿಯ ಪ್ರಸ್ಟೀಜ್ ಅಪಾರ್ಟ್‍ಮೆಂಟ್‍ನಲ್ಲಿರುವ ಕೆಲವರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುದ್ದಿ ಹಬ್ಬಿತ್ತು. ಅಲ್ಲದೆ ಇದೇ ಅಪಾರ್ಟ್‍ಮೆಂಟ್‍ನಲ್ಲಿ ರವಿಶಂಕರ್ ಗೌಡ ಹಾಗೂ ನಟಿ ಪೂಜಾ ಗಾಂಧಿ ಸಹ ವಾಸವಿದ್ದಾರೆ. ಹೀಗಾಗಿ ಈ ಕುರಿತು ಸುದ್ದಿಯಾಗಿತ್ತು. ಡಿ ಬಾಸ್ ಪತ್ನಿಗೂ ಕೊರೊನಾ ಸೋಂಕು ತಗುಲಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಹೀಗಾಗಿ ಸ್ವತಃ ವಿಜಯಲಕ್ಷ್ಮಿ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟ ಪಡಿಸಿದ್ದಾರೆ. ಡಿ ಬಾಸ್ ಪತ್ನಿ ವಿಜಯಲಕ್ಷ್ಮಿ ಟ್ವೀಟ್ ಮಾಡಿದ್ದು, ನನಗೆ ಕೊರೊನಾ ಸೋಂಕು ತಗುಲಿರುವ ಕುರಿತು ವದಂತಿ ಹಬ್ಬಿದೆ. ಇದು ಸುಳ್ಳು, ನಾನು ಸಂಪೂರ್ಣವಾಗಿ ಆರಾಮಾಗಿದ್ದೇನೆ. ಇಂತಹ ಕಠಿಣ ಸಂದರ್ಭದಲ್ಲಿ ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿದ್ದಾರೆ.

Leave A Reply

Your email address will not be published.