ಸೋಮವಾರ, ಏಪ್ರಿಲ್ 28, 2025
HomeCinemaYeddyurappa Again CM Karnataka : ಮತ್ತೆ ಮುಖ್ಯಮಂತ್ರಿಯಾಗ್ತಿದ್ದಾರೆ ಬಿ.ಎಸ್.ಯಡಿಯೂರಪ್ಪ : ಸ್ಯಾಂಡಲ್ ವುಡ್ ಗೆ...

Yeddyurappa Again CM Karnataka : ಮತ್ತೆ ಮುಖ್ಯಮಂತ್ರಿಯಾಗ್ತಿದ್ದಾರೆ ಬಿ.ಎಸ್.ಯಡಿಯೂರಪ್ಪ : ಸ್ಯಾಂಡಲ್ ವುಡ್ ಗೆ ರಾಜಾಹುಲಿ ಎಂಟ್ರಿ

- Advertisement -

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ರಾಜಾಹುಲಿ ಎಂದೇ ಖ್ಯಾತಿಗಳಿಸಿಕೊಂಡ ಮಾಜಿಸಿಎಂ ಬಿ.ಎಸ್.ಯಡಿಯೂರಪ್ಪನವರದ್ದು ದಣಿವರಿಯದ ವ್ಯಕ್ತಿತ್ವ. ಸದ್ಯ ಸಿಎಂ ಹುದ್ದೆಯಿಂದ ಕೆಳಗಿಳಿದರೂ ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿರೋ ಬಿ.ಎಸ್.ಯಡಿಯೂರಪ್ಪ (Yeddyurappa Again CM Karnataka , ಈಗ ಬಣ್ಣ ಹಚ್ಚುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡಲು ಸಿದ್ಧವಾಗಿದ್ದಾರೆ. ತಾನೇ ಮಾಡಿದ ಸಹಾಯದಿಂದ ವೈದ್ಯಕೀಯ ಸೀಟು ಪಡೆದ ವಿದ್ಯಾರ್ಥಿನಿಯ ಕತೆಯನ್ನು ಆಧರಿಸಿ ತೆರೆಗೆ ಬರ್ತಿರೋ ಸಿನಿಮಾದಲ್ಲಿ ಬಿ.ಎಸ್.ಯಡಿಯೂರಪ್ಪ ಬಣ್ಣ ಹಚ್ತಿರೋದು ಈ ಸಿನಿಮಾದ ವಿಶೇಷತೆ.

ತನುಜಾ ಎಂಬ ಹೆಸರಿನ ಈ ಸಿನಿಮಾದಲ್ಲಿ ಬಿಎಸ್ವೈ ಸಿಎಂ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಬಿಎಸ್ವೈ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದರು. ಈ ವೇಳೆ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಸೇರಿದಂತೆ ಮಾಧ್ಯಮಗಳು ಸರ್ಕಾರದ ಗಮನ ಸೆಳೆದಿದ್ದರು. ಹೀಗಾಗಿ ಸರ್ಕಾರ ಆಕೆಯ ಸಹಾಯಕ್ಕೆ ನಿಂತಿತ್ತು. ಹೀಗೆ ಎಲ್ಲರ ಸಹಕಾರದಿಂದ ತನುಜಾ ಪರೀಕ್ಷೆ ಬರೆದು ನೀಟ್ ಪಾಸಾಗಿದ್ದು ಇಡೀ ದೇಶದ ಗಮನ ಸೆಳೆದಿತ್ತು. ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಬಂದ ವಿದ್ಯಾರ್ಥಿನಿಯ ಸಾಹಸವನ್ನು ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿಯವರು ಚಿತ್ರರೂಪಕ್ಕೆ ತರುತ್ತಿದ್ದು ನಿರ್ದೇಶನ ಮಾಡುತ್ತಿದ್ದಾರೆ. ಇದೀಗ ಇದೇ ಸಿನಿಮಾಕ್ಕೆ ಮಾಜಿ ಸಿಎಂ ಬಿಎಸ್ವೈ ಮುಖ್ಯಮಂತ್ರಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈಗಾಗಲೇ ಬೆಂಗಳೂರಿನ ಹೊರವಲಯದಲ್ಲಿ ಮೊದಲ ದಿನದ ಅವರ ಭಾಗದ ಚಿತ್ರೀಕರಣ ಯಶಸ್ವಿಯಾಗಿ ನಡೆದಿದ್ದು ಅತ್ಯದ್ಭುತವಾಗಿ ನಟಿಸಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

Beyond visions cinemas ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ತನುಜಾ” ಚಿತ್ರ ನೈಜ ಘಟನೆಯಾಧಾರಿತ ವಾಗಿದ್ದು ಶಿವಮೊಗ್ಗದ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣ ಗೊಂಡಿದೆ. ಸರ್ಕಾರಿ ಹಿಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ‌ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದು ತಾರಾಗಣದಲ್ಲಿ ಬಿ.ಎಸ್ ಯಡಿಯೂರಪ್ಪ, ವಿಶ್ವೇಶ್ವರಯ್ಯ ಭಟ್, ಡಾ.ಕೆ ಸುಧಾಕರ್, ರಾಜೇಶ್ ನಟರಂಗ, ಕೈಲಾಶ್, ಸಂಧ್ಯಾ ಅರಕೆರೆ, ಬೇಬಿ ಶ್ರೀ, ಅಭಿನಯಿಸುತ್ತಿದ್ದಾರೆ‌

ಪ್ರದ್ಯೋತನ ಸಂಗೀತ ನಿರ್ದೇಶನ ಹಾಗೂ ರವೀಂದ್ರನಾಥ್ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನವಿದ್ದು ಆರ್ ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ ಪ್ರಹ್ಲಾದ್ ಸಂಭಾಷಣೆ ಬರೆದಿದ್ದು ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಕೇವಲ ಯಡಿಯೂರಪ್ಪ ನವರ ಹೋರಾಟ,ಪ್ರತಿಭಟನೆ, ರಾಜಕೀಯದ ಮುಖವನ್ನೇ ನೋಡಿದ ಅಭಿಮಾನಿಗಳಿಗೆ ನಟನೆಯನ್ನು ನೋಡುವ ಸದವಕಾಶ ಸಿಕ್ಕಿದ್ದು ಸಿನಿಮಾ ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ಇದನ್ನೂ ಓದಿ : ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಸಜ್ಜಾದ ಫ್ಯಾನ್ಸ್ : ನಾಲ್ಕು ದಿನಗಳ ಕಾಲ ನಡೆಯಲಿದೆ ಪುನೀತ್‌ ರಾಜ್‌ ಕುಮಾರ್ ಬರ್ತಡೇ

ಇದನ್ನೂ ಓದಿ : ಬಸವರಾಜ ಹೊರಟ್ಟಿ ಬಿಜೆಪಿ ಸೇರ್ತಾರಾ? ಓದಿ ನಿಮ್ಮ ಅಭಿಪ್ರಾಯ ತಿಳಿಸಿ

(Yeddyurappa Again CM in Karnataka, Grand Entry Sandalwood Tanuja Movie)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular