Zebra movie : ಡಾಲಿ ಧನಂಜಯ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾಕ್ಕೆ ಟೈಟಲ್‌ ಫಿಕ್ಸ್‌

ಸ್ಯಾಂಡಲ್‌ವುಡ್‌ನ ನಟ ಡಾಲಿ ಧನಂಜಯ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ತಯಾರಾಗಿದೆ. ನಟ ಧನಂಜಯ್ ಪೋಷಕ ನಟರಾಗಿ ನಟಿಸಿರುವ ‘ಪುಷ್ಪ’ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿತ್ತಾದರೂ, ಈಗ ಪ್ರಥಮ ಬಾರಿಗೆ ಮುಖ್ಯಭೂಮಿಕೆಯಲ್ಲಿ ನಾಯಕನಟನಾಗಿ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಡಾಲಿ ಧನಂಜಯ್‌ ಕಾಣಿಸಿಕೊಳ್ಳುತ್ತಿದ್ದಾರೆ. ಡಾಲಿ ಧನಂಜಯ್ ಮತ್ತು ತೆಲುಗಿನ ಸತ್ಯದೇವ್ ಜೊತೆಯಾಗಿ ನಟಿಸುತ್ತಿರುವ ಸಿನಿಮಾದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ಸಿನಿಮಾದ ಹೆಸರು ಇಂದು ರಿವೀಲ್ ಮಾಡಲಾಗಿದೆ. ಈ ಸಿನಿಮಾಕ್ಕೆ ‘ಜೀಬ್ರಾ’ (Zebra movie) ಎನ್ನುವ ಹೆಸರನ್ನು ಇಡಲಾಗಿದೆ.

ನಟ ಧನಂಜಯ್‌ ನಟಿಸಿದ್ದ ‘ಹೆಡ್ ಬುಷ್’ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಲಿದೆ ಎನ್ನಲಾಗಿತ್ತು. ಆದರೆ ಅದು ಪ್ಯಾನ್ ಇಂಡಿಯಾ ಸಿನಿಮಾ ಆಗಲಿಲ್ಲ. ಹಾಗಾಗಿ ಇದು ಡಾಲಿ ಧನಂಜಯ್ ನಾಯಕನಾಗಿ ನಟಿಸಿದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಎನಿಸಿಕೊಳ್ಳಲಿದೆ. ಓಲ್ಡ್ಟೌನ್ ಪಿಕ್ಚರ್ಸ್ ಎಲ್ಎಲ್ಪಿ ಮತ್ತು ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ನಿರ್ಮಿಸುತ್ತಿರುವ ಈ ಮಲ್ಟಿಸ್ಟಾರರ್ ಸಿನಿಮಾವನ್ನು ‘ಪೆಂಗ್ವಿನ್’ ಖ್ಯಾತಿಯ ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ 50 ದಿನಗಳ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಬಾಕಿ ಉಳಿದಿರುವ ಚಿತ್ರೀಕರಣವನ್ನು ಹೈದರಾಬಾದ್, ಕೊಲ್ಕತ್ತಾ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

‘ಜೀಬ್ರಾ’ ಸಿನಿತಂಡಕ್ಕೆ ಇದೀಗ ‘ಕೆಜಿಎಫ್ 1 ಮತ್ತು 2’ ಮುಂತಾದ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಆಗಮನವಾಗಿದೆ. ಇತ್ತೀಚೆಗಷ್ಟೇ ಅಜಯ್ ದೇವಗನ್ ನಿರ್ದೇಶನದ ‘ಭೋಲಾ’ ಸಿನಿಮಾಕ್ಕೆ ಹಿನ್ನೆಲೆ ಸಂಗೀತ ಸಂಯೋಜಿಸಿರುವ ರವಿ ಬಸ್ರೂರು, ಇದೀಗ ಜೀಬ್ರಾ ಸಿನಿಮಾಕ್ಕೂ ಸಂಗೀತ ಸಂಯೋಜಿಸುತ್ತಿದ್ದಾರೆ. ಸಿನಿತಂಡಕ್ಕೆ ರವಿ ಬಸ್ರೂರು ಸೇರ್ಪಡೆಯಾಗಿರುವ ವಿಷಯ ಕುರಿತು ಮಾತನಾಡಿರುವ ನಿರ್ಮಾಪಕರಾದ ಬಾಲಸುಂದರಂ ಮತ್ತು ಪದ್ಮಜಾ ರೆಡ್ಡಿ, ‘ರವಿ ಬಸ್ರೂರು ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತವು ಈ ಸಿನಿಮಾದ ಹೈಲೈಟ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಅವರು ಸಿನಿಮಾದ ಆತ್ಮವನ್ನು ತಮ್ಮ ಸಂಗೀತದ ಮೂಲಕ ಅದ್ಭುತವಾಗಿ ಎತ್ತಿಹಿಡಿಯಲಿದ್ದಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಿಚ್ಚನ ಕರ್ನಾಟಕ ಚಲನಚಿತ್ರ ಕಪ್‌ನಲ್ಲಿ ಆಡಲಿದ್ದಾರೆ ಕ್ರಿಸ್ ಗೇಲ್, ಸುರೇಶ್ ರೈನಾ, ಲಾರಾ, ದಿಲ್ಷಾನ್

ಇದನ್ನೂ ಓದಿ : Actress Jamuna : ಸ್ಯಾಂಡಲ್‌ವುಡ್‌ನ “ಸಾಕ್ಷಾತ್ಕಾರ” ಸಿನಿಮಾ ಖ್ಯಾತಿಯ ನಟಿ ಜಮುನಾ ಇನ್ನಿಲ್ಲ

ಇದನ್ನೂ ಓದಿ : Pathan Collection: ಹಿಂದಿ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ನಲ್ಲಿ ದಾಖಲೆ ಬರೆಯುತ್ತಿದೆ ಪಠಾಣ್‌ ಸಿನಿಮಾ

“ಜೀಬ್ರಾ” ಸಿನಿಮಾದಲ್ಲಿ ಧನಂಜಯ ಮತ್ತು ಸತ್ಯದೇವ್ ಜೊತೆಗೆ ‘ಕಟ್ಟಪ್ಪ’ ಖ್ಯಾತಿಯ ಸತ್ಯರಾಜ್, ಸುನೀಲ್ ಮುಂತಾದವರು ನಟಿಸುತ್ತಿದ್ದಾರೆ. ಇನ್ನು ಈ ಸಿನಿಮಾಕ್ಕೆ ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣ ಹಾಗೂ ಅನಿಲ್ ಕ್ರಿಶ್ ಅವರ ಸಂಕಲನ ಇದೆ. ಡಾಲಿ ಧನಂಜಯ್‌ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಡಾಲಿ ನಟನೆಯ ‘ಹೊಯ್ಸಳ’ ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಅದರ ಬಳಿಕ ‘ಉತ್ತರಕಾಂಡ’ ಸಿನಿಮಾ ತೆರೆಗೆ ಬರಲಿದೆ. ‘ಡಾಲಿ’ ಹೆಸರಿನ ಸಿನಿಮಾವನ್ನು ಘೋಷಿಸಲಾಗಿದೆಯಾದರೂ ಇನ್ನು ಸೆಟ್ಟೇರಿಲ್ಲ. ಸದ್ಯ ನಟ ಧನಂಜಯ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾಕ್ಕೆ ಟೈಟಲ್‌ ಫಿಕ್ಸ್‌ ಮಾಡಿದ್ದಾರೆ.

Zebra movie : title fix for Dolly Dhananjay starrer pan India movie

Comments are closed.