ಮಡಿಕೇರಿ : ನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯ ಕುಕ್ಲೂರಿನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ರಶ್ಮಿಕಾ ಮಂದಣ್ಣ ಕನ್ನಡದ ಅಂಜನಿ ಪುತ್ರ, ಚಮಕ್, ತೆಲುಗಿನ ಗೀತ ಗೋವಿಂದಂ, ದೇವದಾಸ್, ಡಿಯರ್ ಕಾಮ್ರೇಡ್, ಭೀಷ್ಮ ಚಿತ್ರಗಳಲ್ಲಿ ನಟಿಸಿದ್ದಾರೆ. ಗುರುವಾರ ಬೆಳಗ್ಗೆ 7.30ಕ್ಕೆ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ರಶ್ಮಿಕಾ ಮಂದಣ್ಣ ಟಾಲಿವುಡ್ ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಜಾಹೀರಾತು ಏಜೆನ್ಸಿಗಳ ಜೊತೆಗೆ ಷೇರು ವ್ಯವಹಾರವನ್ನೂ ಹೊಂದಿದ್ದಾರೆಂದು ಹೇಳಲಾಗುತ್ತಿದೆ.
ರಶ್ಮಿಕಾ ಮಂದಣ್ಣ ಸದ್ಯ ಹೈದ್ರಾಬಾದ್ ನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಮೈಸೂರು ವಿಭಾಗದ ಐಟಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿದಾಳಿ : ಸಮನ್ಸ್ ಜಾರಿ ಮಾಡಿದ ಐಟಿ ಅಧಿಕಾರಿಗಳು
- Advertisement -