Mangalore : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ : ಮೂವರ ಬಂಧನ

ಮಂಗಳೂರು : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಟೋ ಚಾಲಕ ರಿಜ್ವಾನ್, ಮಹಮದ್ದ ಖಾಸೀಮ್ ಹಾಗೂ ಅಜ್ಮಲ್ ಹುಸೇನ್ ಎಂದು ಗುರುತಿಸಲಾಗಿದೆ.

ಕೆಲವು ದಿನಗಳ ಹಿಂದೆ ಆಟೋ ಚಾಲಕ ತನ್ನ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸಂತ್ರಸ್ಥೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿ ರಿಜ್ವಾನ್‌ ವಿರುದ್ದ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್ನೊಂದೆಡೆಯಲ್ಲಿ ಬಾಲಕಿಯೋರ್ವಳು ತನ್ನ ಮೇಲೆ ಸ್ನೇಹಿತರಿಬ್ಬರು ಅತ್ಯಾಚಾರವೆಸಗಿದ್ದು, ತನಗೆ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿದ್ದಾಳೆ. ಅಪ್ರಾಪ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಅಜ್ಮಲ್‌ ಹುಸೇನ್‌ ಹಾಗೂ ಖಾಸೀಮ್‌ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳ ವಿರುದ್ದವೂ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ದಲಿತನ ಹುಡುಗನನ್ನು ಮದ್ವೆಯಾಗಿದ್ದಕ್ಕೆ ಮಗಳನ್ನೇ ಅರೆ ನಗ್ನ ಗೊಳಿಸಿದ ತಂದೆ !

ಇದನ್ನೂ ಓದಿ : ಪ್ರೀತಿಗೆ ತಂದೆಯೇ ವಿಲನ್‌ ! ಮಗಳನ್ನು ಕೊಲೆಗೈದು ಶವ ಎಸೆದ ಅಪ್ಪ

ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳ ಆಧಾರದ ಮೇಲೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ರಿಷೀಕೇಶ್ ಭಗವಾನ್ ಸೋನಾವಾನೆ ತಿಳಿಸಿದ್ದಾರೆ.

(Sexual harassment of minors: Arrest of 3 in Bantwala Mangalore )

Comments are closed.