Tomato fever in Udupi : ಉಡುಪಿಯ 4 ವರ್ಷದ ಮಗುವಿಗೆ ಟೊಮೆಟೊ ಜ್ವರ ? ಸ್ಪಷ್ಟನೆ ಕೊಟ್ಟ ಆರೋಗ್ಯ ಇಲಾಖೆ

ಉಡುಪಿ : ರಾಜ್ಯದಲ್ಲಿ ಕೊರೊನಾ 4ನೇ ಅಲೆಯ ಭೀತಿಯ ನಡುವಲ್ಲೇ ಇಂದಿನಿಂದ ಶಾಲಾರಂಭಗೊಂಡಿದೆ. ಈ ನಡುವಲ್ಲೇ ರಾಜ್ಯದಲ್ಲಿ ಮತ್ತೊಂದು ಆತಂಕ ಶುರುವಾಗಿದೆ. ಅದ್ರಲ್ಲೂ ಉಡುಪಿಯಲ್ಲಿ ನಾಲ್ಕು ವರ್ಷದ ಮಗುವಿಗೆ ಟೊಮೆಟೋ ಜ್ವರ ( tomato fever in Udupi)ಕಾಣಿಸಿಕೊಂಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದ್ರೆ ಈ ಕುರಿತು ಆರೋಗ್ಯ ಇಲಾಖೆ ಸ್ಪಷ್ಟನೆಯನ್ನು ಕೊಟ್ಟಿದೆ.

ಉಡುಪಿ ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ (Tomato fever) ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಜ್ವರ ಕಾಣಿಸಿಕೊಂಡಿದ್ದ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಉಡುಪಿ ಜಿಲ್ಲೆಯಲ್ಲಿ ಟೊಮೆಟೋ ಜ್ವರ ಪತ್ತೆಯಾಗಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಅವರು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಇಲಾಖೆಯ ಸೂಚನೆಯಂತೆಯೇ ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೇರಳದಲ್ಲಿ ಟೊಮೆಟೋ ಜ್ವರ (Tomato fever) ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇರಿಸಲಾಗುತ್ತಿದೆ. ಅಲ್ಲದೇ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ರಾಜ್ಯ ಆರೋಗ್ಯ ಇಲಾಖೆಯ ಸೂಚನೆಯ ಹಿನ್ನೆಲೆಯಲ್ಲಿ ಕೇರಳದ ಗಡಿಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕಟ್ಟೆಚ್ಚರವನ್ನು ವಹಿಸಲಾಗುತ್ತಿದೆ.

ಟೊಮೆಟೋ ಜ್ವರದ (Tomato fever) ಲಕ್ಷಣಗಳು :

ಟೊಮೆಟೋ ಜ್ವರ ಕಾಣಿಸಿಕೊಂಡ ಮಕ್ಕಳಲ್ಲಿ ಸಾಮಾನ್ಯವಾಗಿ ವಿಪರೀತ ಜ್ವರ, ನಿರ್ಜಲೀಕರಣ, ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು, ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳತ ವಾಕರಿಕೆ, ವಾಂತಿ, ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು ಆಯಾಸ, ದೇಹದಲ್ಲಿ ನೋವು ಕಾಣಿಸಿಕೊಳ್ಳಲಿದೆ. ಇಂತಹ ಲಕ್ಷಣಗಳು ಕಾಣಿಸಿಕೊಂಡ್ರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬಹುದಾಗಿದೆ. ಆದರೆ ಯಾವುದೇ ಕಾರಣಕ್ಕೂ ಪೋಷಕರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೇರಳದಲ್ಲಿ ಇದುವರೆಗೆ ಒಟ್ಟು ಐವತ್ತು ಅಧಿಕ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ. ಶಾಲಾರಂಭದ ಹೊತ್ತಲೇ ಟೊಮೆಟೋ ಜ್ವರ (Tomato fever) ಕಾಣಿಸಿಕೊಂಡಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಶಾಲೆಗಳಲ್ಲಿಯೂ ಜ್ವರದ ಬಗ್ಗೆ ನಿಗಾ ಇರಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ : Drugs Young Woman rape: ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ, ಸುಲಿಗೆ : ಆರೋಪಿ ಅರೆಸ್ಟ್‌

ಇದನ್ನೂ ಓದಿ : 20 Aspirants : ಕ್ಲೈಮ್ಯಾಕ್ಸ್ ಹಂತದಲ್ಲಿ ಸಂಪುಟ ಸರ್ಕಸ್ : ಹೈಕಮಾಂಡ್ ಕೈಸೇರಿದೆ 20 ಆಕಾಂಕ್ಷಿಗಳ ಲಿಸ್ಟ್

4 year old baby tomato fever in Udupi Department of Health clarified

Comments are closed.