ಕರಾವಳಿಯಲ್ಲಿ 5 ದಿನ ಬಾರೀ ಮಳೆ : ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮೇ 18 ರಂದು ಉಡುಪಿ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ಎರಡು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ. ಅವರು ಮಾಹಿತಿ ನೀಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಳೆಯ ಕುರಿತು ಮುನ್ಸೂಚನೆಯನ್ನು ನೀಡಿದೆ. ಮೇ 16ರಂದು ಹವಾಮಾನ ಇಲಾಖೆ ನೀಡಿದ ವರದಿಯಂತೆ ಮೇ 17 ಮತ್ತು 19 ರಂದು ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಮೇ ೧೮ರಂದು ಅತೀ ಹೆಚ್ಚು ಮಳೆ ಸುರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿನ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿಭಾಯಿಸಲು ತಯಾರಿ ಮಾಡಿಕೊಳ್ಳುವಂತೆ ಸೂಚನೆಯನ್ನು ನೀಡಿದೆ. ಸಾರ್ವಜನಕರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿದಂತೆ ನಿರ್ಬಂಧ ಹೇರಲಾಗಿದೆ. ಇನ್ನು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ.

ಈಗಾಗಲೇ ಕೇರಳದಲ್ಲಿ ಭಾರೀ ಮಳೆ ಸುರಿಯುವ ಸೂಚನೆ ಸಿಕ್ಕ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಬಾರೀ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ರೆ, ಉಡುಪಿ, ಮಂಗಳೂರಿನಲ್ಲಿಯೂ ತುಂತುರು ಮಳೆ ಸುರಿದಿದೆ.

ಇದನ್ನೂ ಓದಿ : ಉಡುಪಿಯ 4 ವರ್ಷದ ಮಗುವಿಗೆ ಟೊಮೆಟೊ ಜ್ವರ ? ಸ್ಪಷ್ಟನೆ ಕೊಟ್ಟ ಆರೋಗ್ಯ ಇಲಾಖೆ

ಇದನ್ನೂ ಓದಿ : ಹನಿಟ್ರ್ಯಾಪ್ ಗೆ ಬಿಜೆಪಿ ಮುಖಂಡ ಬಲಿ : ಡೆತ್ ನೋಟ್ ನಲ್ಲಿ ಬಯಲಾಯ್ತು ಸತ್ಯ

5 Days Heavy rain in Coastal district Red Alert Declared in Udupi

Comments are closed.