check of 25 lakh rupees : ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ 25 ಲಕ್ಷ ರೂ. ಚೆಕ್​ ನೀಡಿದ ಸಿಎಂ ಬೊಮ್ಮಾಯಿ

ದಕ್ಷಿಣ ಕನ್ನಡ : check of 25 lakh rupees : ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಪ್ರವೀಣ್​ ನೆಟ್ಟಾರು ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಮೃತ ಪ್ರವೀಣ್​ ಕುಟುಂಬಸ್ಥರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳುವ ಪ್ರಯತ್ನವನ್ನು ಮಾಡಿದರು. ಪ್ರವೀಣ್​ ಪತ್ನಿ ಹಾಗೂ ಪೋಷಕರ ಜೊತೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಬಳಿಕ 25 ಲಕ್ಷ ರೂಪಾಯಿ ಪರಿಹಾರದ ಚೆಕ್​ ವಿತರಿಸಿದ್ದಾರೆ.


ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ ಇದೇ ವೇಳೆಯಲ್ಲಿ ಪ್ರವೀಣ್​ ಹಂತಕರಿಗೆ ತಕ್ಕ ಶಿಕ್ಷೆ ನೀಡುವ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇದಾದ ಬಳಿಕ ಬೆಂಗಳೂರಿನಿಂದ ವಿಮಾನದಲ್ಲಿ ಮಂಗಳೂರಿಗೆ ಹೊರಟ ಸಿಎಂ ಬೊಮ್ಮಾಯಿ ಮಂಗಳೂರು ಏರ್​ಪೋರ್ಟ್​ಗೆ ಬಂದಿಳಿದರು. ಅಲ್ಲಿಂದ ರಸ್ತೆ ಮಾರ್ಗವಾಗಿ ಭಾರೀ ಭದ್ರತೆಯೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳ್ಯ ತಾಲೂಕಿನಲ್ಲಿರುವ ಬೆಳ್ಳಾರೆ ಸಮೀಪದ ನೆಟ್ಟಾರು ಗ್ರಾಮಕ್ಕೆ ತೆರಳಿದರು. ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್ ಕಟೀಲ್​, ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್​ ಕುಮಾರ್​, ಸಿ.ಟಿ ರವಿ , ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಸಾಕಷ್ಟು ಬಿಜೆಪಿ ನಾಯಕರು ಸಾಥ್​ ನೀಡಿದರು.


ನೆಟ್ಟಾರು ಗ್ರಾಮದಲ್ಲಿರುವ ಮೃತ ಪ್ರವೀಣ್​ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ಕುಟುಂಬಸ್ಥರ ಜೊತೆಯಲ್ಲಿ ಸಮಾಲೋಚನೆ ನಡೆಸಿ ಸಾಂತ್ವನ ಹೇಳುವ ಪ್ರಯತ್ನ ಮಾಡಿದರು. ಈ ವೇಳೆಯಲ್ಲಿ ಸಿಎಂ ಬೊಮ್ಮಾಯಿ ಜೊತೆಯಲ್ಲಿ ಮಾತನಾಡಿದ ಪ್ರವೀಣ್​ ಪತ್ನಿ ನೂತನಾ ನೆಟ್ಟಾರು, ನನ್ನ ಪತಿಗೆ ಬಂದಂತಹ ಪರಿಸ್ಥಿತಿ ಇನ್ಯಾರಿಗೂ ಬರ ಕೂಡದು. ಆರೋಪಿಗಳಿಗೆ ಪರೋಕ್ಷವಾಗಿ ಅಥವಾ ಪ್ರತ್ಯಕ್ಷವಾಗಿ ಸಹಾಯ ಮಾಡಿದವರಿಗೂ ಗಲ್ಲು ಶಿಕ್ಷೆ ನೀಡಬೇಕು. ನನ್ನ ಪತಿಯನ್ನು ಕೊಂದವರನ್ನು ನೀವು ಎನ್​ಕೌಂಟರ್​ ಮಾಡಿಸಿದರೆ ಮಾತ್ರ ನನಗೂ ಹಾಗೂ ನನ್ನ ಪತಿಗೂ ತೃಪ್ತಿ ಸಿಗಲಿದೆ. ನನ್ನ ಪತಿ ಪಕ್ಷಕ್ಕಾಗಿ ಹೋರಾಡಿದ್ದಾರೆ. ಈಗ ಅವರ ಸಾವಿಗೆ ನೀವೇ ನ್ಯಾಯ ನೀಡಬೇಕು ಎಂದು ಹೇಳಿದರು.

ಪ್ರವೀಣ್​ ಕುಟುಂಬಸ್ಥರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣವನ್ನು ನಾವು ಕೇವಲ ಒಂದು ಕೊಲೆ ಕೇಸ್ ಎಂಬಂತೆ ನೋಡುತ್ತಿಲ್ಲ. ಈ ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಅತಿ ಶೀಘ್ರದಲ್ಲಿಯೇ ಎಲ್ಲಾ ಆರೋಪಿಗಳನ್ನು ಹೆಡೆಮುರಿ ಕಟ್ಟಲಿದ್ದೇವೆ. ಈ ಕೊಲೆಗೆ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಶಿಕ್ಷೆ ವಿಧಿಸಲಾಗುತ್ತದೆ. ಪ್ರವೀಣ್​ ಕುಟುಂಬಸ್ಥರಿಗೆ 25 ಲಕ್ಷ ರೂಪಾಯಿ ಪರಿಹಾರದ ಚೆಕ್​​ ನೀಡಿದ್ದೇನೆ. ಅಗತ್ಯ ಬಿದ್ದರೆ ಈ ಪ್ರಕರಣವನ್ನು ಎನ್​ಐಎಗೆ ವಹಿಸುತ್ತೇವೆ ಎಂದು ಹೇಳಿದರು .

ಇದನ್ನು ಓದಿ : CT Ravi : ಪಿಎಫ್​​ಐ ಸಂಘಟನೆ ಬ್ಯಾನ್​ ಮಾಡ್ತೇವೆ, ಯಾರೂ ಸಮೂಹ ಸನ್ನಿಗೆ ಒಳಗಾಗದಿರಿ : ಕಾರ್ಯಕರ್ತರಲ್ಲಿ ಸಿ.ಟಿ ರವಿ ಮನವಿ

ಇದನ್ನೂ ಓದಿ : Accused remanded in judicial custody : ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣ : ಆರೋಪಿಗಳಿಗೆ ಆ.11ರವರೆಗೆ ನ್ಯಾಯಾಂಗ ಬಂಧನ

A check of 25 lakh rupees was distributed to the family members of Praveen Nettaru

Comments are closed.