ಕುಂದಾಪುರ: (Attack on Byndur boys) ಬೇಕರಿ ನಡೆಸುತ್ತಿದ್ದ ಬೈಂದೂರಿನ ಯುವಕರ ಮೇಲೆ ಸ್ಥಳೀಯ ಪುಡಿರೌಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಿನ್ನೆ ಬೆಂಗಳೂರಿನ ಕುಂದನಹಳ್ಳಿಯಲ್ಲಿ ನಡೆದಿತ್ತು. ಇದೀಗ ಹಲ್ಲೆ ನಡೆಸಿದ ಮೂವಲು ಪುಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೈಂದೂರಿನ ಯುವಕರ ಮೇಲೆ ಸ್ಥಳೀಯ ರೌಡಿಗಳು ನಡೆಸಿದ ಮಾರಣಾಂತಿಕ ಹಲ್ಲೆಯನ್ನು (Attack on Byndur boys) ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಸೇರಿದಂತೆ ಹಲವರು ಖಂಡಿಸಿದ್ದಾರೆ. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗುತ್ತಿದ್ದಂತೆ ಶಾಸಕರು ಸ್ವಯಂ ಪ್ರೇರಿತರಾಗಿ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಕರೆ ಮಾಡಿ ಹಲ್ಲೆ ನಡೆಸಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಘಟನೆಯ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ಮಾತನಾಡಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹಾಗೂ ಶಾಸಕ ಗೋಪಾಲ್ ಬಾಬು ಪೂಜಾರಿ ಬೆಂಗಳೂರು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ರಕ್ಷಣೆ ನೀಡಲು ಸಹಕರಿಸುವಂತೆ ಒತ್ತಾಯಿಸಿದ್ದಾರೆ.
ಅಲ್ಲದೆ ಹಲ್ಲೆಯ ನಡೆಸಿದ ಘಟನೆಯ ಕುರಿತಾಗಿ ಕುಂದಾಪುರ ತಾಲೂಕು ಯುವ ಬಂಟರ ಸಂಘ ತೀವ್ರವಾಗಿ ಖಂಡಿಸಿದ್ದು, ಹೊಟ್ಟೆಪಾಡಿಗಾಗಿ ಕಷ್ಟಪಟ್ಟು ಸಾಲ ಮಾಡಿ ತಮ್ಮ ಜೀವನ ನಿರ್ವಹಣೆಗಾಗಿ ಬೆಂಗಳೂರಿಗೆ ಹೋಗಿ ಕೆಲಸ ಮಾಡಿಕೊಂಡಿದ್ದ ಯುವಕರ ಮೇಲೆ ಹಲ್ಲೆ ನಡೆಸಿದ ಪುಡಿ ರೌಡಿಗಳಿಗೆ ಶಿಕ್ಷೆ ನೀಡುವಂತೆ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಕಾರ್ಕಳದಲ್ಲಿ ಕಾರು ಬಸ್ ಭೀಕರ ಅಪಘಾತ : ಮಗು ಸೇರಿ ಮೂವರು ಸಾವು
ಇದನ್ನೂ ಓದಿ : Student suspended: ಮಂಗಳೂರಲ್ಲಿ ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಸಭ್ಯ ನೃತ್ಯ: ನಾಲ್ಕು ವಿದ್ಯಾರ್ಥಿಗಳ ಅಮಾನತು
ಕೊನೆಗೂ ಶಾಸಕರ ಖಂಡನೆಗೆ ಮಣಿದ ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿದ ಮೂವರು ದುಷ್ಕರ್ಮಿಗಳನ್ನು ಬಂಧಿಸಿದೆ.
(Attack on Byndur boys) The incident took place yesterday in Kundanahalli, Bengaluru where the local hooligans attacked the boys of Byndur who were running a bakery. Now the police have arrested the three thugs who carried out the attack