ಕುಂದಾಪುರ : ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಬಿ ವರ್ಗದ ಆಡಿಟ್ ವರ್ಗೀಕರಣ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ (Koteshwar Agricultural Service Cooperative Society) ಈ ವಿಶೇಷ ಗೌರವ ದೊರಕಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯು ಮಂಗಳೂರಿನ ಜಿಲ್ಲಾ ಬ್ಯಾಂಕಿನ ಉತ್ಕೃಷ್ಠ ಸಹಕಾರಿ ಸೌಧದಲ್ಲಿ ಜರುಗಿದೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷರಾದ ಅಶೋಕ್ ಬೀಜಾಡಿ, ಮುಖ್ಯ ಕಾರ್ಯನಿರ್ವಹಣಾಧಿಖಾರಿ ವಿಶ್ವೇಶ್ವರ್ ಐತಾಳ್ ನಿರ್ದೇಶಕರಾದ ಶರತ್ ಕುಮಾರ್ ಹೆಗ್ಡೆ, ಮೋಹನದಾಸ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕಾರ ಮಾಡಿದರು.
ಜಿಲ್ಲೆಯಲ್ಲಿ ವಿವಿಧ ಹೆಸರಿನಲ್ಲಿ ಸಹಕಾರಿ ಬ್ಯಾಂಕ್‌ಗಳು ವ್ಯವಹಾರ ನಡೆಸುತ್ತಿದ್ದು, ಇದ್ದರಿಂದ ಜನಸಾಮಾನ್ಯರಿಗೆ ಪ್ರಯೋಜನಕಾರಿಯಾಗಿದೆ. ಈ ಸಹಕಾರಿ ಬ್ಯಾಂಕ್‌ಗಳನ್ನು ವಿವಿಧ ರೀತಿಯ ಸಾಲ ಸೌಲಭ್ಯಗಳನ್ನು ಕಡಿಮೆ ಬಡ್ಡಿದರದಲ್ಲಿ ನೀಡಲಾಗುತ್ತಿದೆ. ಹಾಗೆಯೇ ಠೇವಣಿ ಇಡುವ ಗ್ರಾಹಕರಿಗೆ ಆಕರ್ಷಕ ಬಡ್ಡಿದರವನ್ನು ನೀಡುತ್ತಿದೆ.
ಇದನ್ನೂ ಓದಿ : Coastal Rains : ಕರಾವಳಿ ಸೇರಿ ರಾಜ್ಯದ ಹಲವೆಡೆ ಮಳೆಯ ಆರ್ಭಟ
ಈ ಸಮಯದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್, ನಿರ್ದೇಶಕರಾದ ಎಸ್. ರಾಜು ಪೂಕಾರಿ, ಎಂ. ಮಹೇಶ ಹೆಗ್ಡೆ, ಬಿ. ನಿರಂಜನ್, ಟಿ.ಜಿ. ರಾಜಾರಾಮ ಭಟ್, ಎಂ ವಾದಿರಾಜ ಶೆಟ್ಟೊ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರಿಶ್ಚಂದ್ರ ಎಂ, ಜೈ ರಾಜ್ ಬಿ.ರೈ, ಬಿ ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್, ಸದಾಶಿವ ಉಳ್ಳಾಲ್ ಭಾಗಿಯಾಗಿದ್ದರು.
B Audit Classification Award for Koteshwar Agricultural Service Cooperative Society