closure of shops : ದಕ್ಷಿಣ ಕನ್ನಡದ ಎಲ್ಲಾ ಅಂಗಡಿ ಮುಂಗಟ್ಟುಗಳು ಸಂಜೆ 6 ಗಂಟೆಗೆ ಬಂದ್​ : ಜಿಲ್ಲಾಧಿಕಾರಿ ಆದೇಶ

ಮಂಗಳೂರು : closure of shops : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಲು ಸಾಲು ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ರಾತ್ರಿಯ ವೇಳೆಯಲ್ಲಿ ಇಂತಹ ಅಹಿತಕರ ಘಟನೆಗಳು ಸಂಭವಿಸುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳು ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಮಾತ್ರ ತೆರೆದಿರಬೇಕು ಎಂಬ ಆದೇಶವನ್ನು ಹೊರಡಿಸಿದೆ. ಈ ಆದೇಶವು ಸೋಮವಾರದವರೆಗೂ ಅನ್ವಯವಾಗಲಿದೆ ಎಂದು ಜಿಲ್ಲಾಡಳಿತದ ಸುತ್ತೋಲೆಯು ಹೇಳಿದೆ.


ಆದರೆ ತುರ್ತು ಸೇವೆಗಳಾದ ಆಸ್ಪತ್ರೆ, ಅಗ್ನಿಶಾಮಕ ದಳ, ಮೆಡಿಕಲ್​ ಶಾಪ್​ಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು ಬೆಳಗ್ಗೆ ಆರು ಗಂಟೆಯಿಂದ ಆರಂಭಗೊಂಡು ಸಂಜೆ ಆರು ಗಂಟೆಗೆ ಬಂದ್​ ಆಗಬೇಕು ಎಂದು ಜಿಲ್ಲಾಡಳಿತದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಒಟ್ಟು ಮೂರು ಮಂದಿ ಯುವಕರು ಕೊಲೆಯಾಗಿದ್ದಾರೆ. ಬೆಳ್ಳಾರೆ ಮಸೀದ್​, ಪ್ರವೀಣ್​ ನೆಟ್ಟಾರು ಹಾಗೂ ಸುರತ್ಕಲ್​ ಫಾಜಿಲ್​ ಎಂಬ ಮೂವರು ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸಾಲು ಸಾಲು ಯುವಕರ ಕೊಲೆಯಾಗುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮುಂದೆ ಇಂತಹ ದುಷ್ಕೃತ್ಯಗಳು ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.


ಜಿಲ್ಲೆಯಲ್ಲಿ ಕೋಮು ಸೌಹಾರ್ದ ಇನ್ನಷ್ಟು ಕದಡಬಾರದು ಎಂಬ ಕಾರಣಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​ರನ್ನು ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಮಂಗಳೂರು ಕಮಿಷನರೇಟ್​ ವ್ಯಾಪ್ತಿಯನ್ನು ಹೊರತುಪಡಿಸಿ ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಹಾಗೂ ಸುಳ್ಯ ಹೀಗೆ ಯಾವುದೇ ತಾಲೂಕುಗಳಿಗೆ ಪ್ರವೇಶಿಸದಂತೆ ಪ್ರಮೋದ್​ ಮುತಾಲಿಕ್​ಗೆ ನಿರ್ಬಂಧ ಹೇರಲಾಗಿದೆ.

ಇದನ್ನು ಓದಿ : Fazil was killed : ಹುಟ್ಟು ಹಬ್ಬಕ್ಕೆಂದು ಬಟ್ಟೆ ತರಲು ಹೋಗಿದ್ದೇ ತಪ್ಪಾಯ್ತಾ : ಬರ್ತ್​ಡೇ ಹಿಂದಿನ ದಿನವೇ ಹತ್ಯೆಯಾದ ಫಾಜಿಲ್​

ಇದನ್ನೂ ಓದಿ : Praveen Nettaru murder case : ಪ್ರವೀಣ್​ ಹತ್ಯೆ ಪ್ರಕರಣ ಎನ್​ಐಎಗೆ ವಹಿಸಿ ಸಿಎಂ ಬೊಮ್ಮಾಯಿ ಆದೇಶ

back to back murders dc orders closure of shops from 6am to 6pm till aug 1

Comments are closed.