ಮಂಗಳೂರು: (Bail for people in drug case) ಇತ್ತೀಚೆಗೆ ನಗರದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಇಪ್ಪತ್ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದರಲ್ಲಿ 13 ಮಂದಿಯನ್ನು ಬಿಡುಗಡೆಗೊಳಿಸಲು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇತ್ತೀಚೆಗೆ ಈ ಪ್ರಕರಣದ ಕುರಿತು ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಮನೋರಾಜ್ ರಾಜೀವ ಹಾಗೂ ವಿಧಿವಿಜ್ಞಾನ ತಜ್ಞ ಡಾ. ಮಹಾಬಲೇಶ್ ಶೆಟ್ಟಿ ಅವರು ಮಾತನಾಡಿದ್ದು, ವೈದ್ಯಕೀಯ ಕಾಲೇಜುಗಳ ಕೆಲವು ವೈದ್ಯರು ಹಾಗೂ ವಿದ್ಯಾರ್ಥಿಗಳು ಗಾಂಜಾ ಮಾರಾಟದಲ್ಲಿ ಭಾಗಿಯಾಗದೇ ಇದ್ದರೂ ಅವರ ವಿರುದ್ದ ಗಾಂಜಾ ಮಾರಾಟದ ಪ್ರಕರಣ ದಾಖಲಿಸಿಕೊಳ್ಳುವ ಮೂಲಕ ಪೊಲೀಸರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ನಿಯಮವನ್ನು ಮೀರಿ ಈ ಪ್ರಕರಣದಲ್ಲಿ ಅಧಿಕಾರಿಗಳು ವರ್ತಿಸಿದ್ದಾರೆ” ಎಂದು ಆರೋಪಿಸಿದ್ದರು.
ಈ ಹಿನ್ನಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ವೈದ್ಯರು ಹಾಗೂ ವಿದ್ಯಾರ್ಥಿಗಳು ಸೇರಿ 13 ಮಂದಿಗೆ ನ್ಯಾಯಾಲಯವೂ ಜಾಮೀನು ಮಂಜೂರು ಮಾಡಿದೆ. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಮಂಗಳೂರಿನ ಪ್ರತಿಷ್ಠಿತ ಮಣಿಪಾಲ, ಅತ್ತಾವರ, ದೇರಳಕಟ್ಟೆಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಈ ದಂಧೆಯಲ್ಲಿ ಭಾಗಿಯಾಗಿದ್ದಾರೆ.ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ (38 ವರ್ಷ) ಹಾಗೂ ಪ್ರಕರಣದಲ್ಲಿ ಭಾಗಿಯಾದ ವೈದ್ಯರು ಹಾಗೂ ಮೆಡಿಕಲ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ : Power cut in Udupi: ಉಡುಪಿ: ಜ. 31 ರಂದು ಜಿಲ್ಲಾದ್ಯಂತ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಖಚಿತ ಮಾಹಿತಿಯ ಮೇರೆಗೆ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆಯಲ್ಲಿ ಇನ್ನೂ ಹಲವರು ಈ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಪ್ರಕರಣದಲ್ಲಿ ಭಾಗಿಯಾಗಿದ್ದ ಹಲವು ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಗಾಂಜಾ ಮಾರಾಟದಲ್ಲಿ ಭಾಗಿಯಾಗದೇ ಇದ್ದರೂ ಅವರ ವಿರುದ್ದ ಗಾಂಜಾ ಮಾರಾಟದ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ 13 ಮಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.
Bail for people in drug case: Mangalore drugs case: Bail for 13 people