ಉಡುಪಿ : (Bakrid 2023) ಬಕ್ರೀದ್ ಅಥವಾ ಈದ್ ಅಲ್-ಅಧಾ ಹಬ್ಬವನ್ನು ಈ ವರ್ಷ ಜೂನ್ 29 ರಂದು ಮುಸ್ಲಿಂ ಭಾಂದವರು ಆಚರಿಸಲಿದ್ದಾರೆ. ಮುಸ್ಲಿಂ ಭಾಂದವರು ಆಚರಿಸುವ ಪವಿತ್ರ ಹಬ್ಬಗಳಲ್ಲಿ ಇದು ಒಂದಾಗಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಈ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಅಕ್ರಮ ಪ್ರಾಣಿ ವಧೆ ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ್ದಾರೆ. ಜಿಲ್ಲೆಯಾದಯಂತ ನಿಯೋಜಿಸಲಾದ ಚೆಕ್‌ಪೋಸ್ಟ್‌ಗಳಲ್ಲಿ, ಅನಧಿಕೃತವಾಗಿ ಜಾನುವಾರುಗಳ ಸಾಗಾಣಿಕೆ ಆಗದಂತೆ ಎಚ್ಚರಿಕೆ ವಹಿಸಬೇಕು. ಹಾಗೆಯೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ, ಅನಧಿಕೃತವಾಗಿ ಜಾನುವಾರಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಮಾತನಾಡಿದ್ದಾರೆ.
ಇನ್ನು ಅಕ್ರಮವಾಗಿ ಜಾನುವಾರುಗಳನ್ನು ವಶವಡಿಸಿಕೊಂಡಲ್ಲಿ ಅವುಗಳ ರಕ್ಷಣೆಗಾಗಿ ಗುರುತಿಸಲಾದ ಗೋಶಾಲೆಗಳಲ್ಲಿ ಸಂರಕ್ಷಣೆ ಮಾಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸಾರ್ವಜನಿಕರು ಇಂತಹ ಪ್ರಕರಣಗಳು ತಮ್ಮ ಆಸುಪಾಸು ಕಂಡು ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಇದನ್ನೂ ಓದಿ : ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ : ಜುಲೈ 1ರ ವರೆಗೆ ಯೆಲ್ಲೋ ಅಲರ್ಟ್
ಇದನ್ನೂ ಓದಿ : Maravanthe Beach : ಕಡಲ್ಕೊರೆತದ ಭೀತಿಯಲ್ಲಿ ಮರವಂತೆ ಬೀಚ್ : ಆತಂಕದಲ್ಲಿ ಪ್ರವಾಸಿಗರು
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ. ಹಾಕೆ. ಕುಂದಾಪುರ ಉಪವಿಭಾಗದ ಅಧಿಕಾರಿ ರಶ್ಮಿ ಎಸ್. ಆರ್, ನಗರ ಸಭೆ ಪೌರಾಯುಕ್ತ ರಮೇಶ್ ನಾಯಕ್, ಪುಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ, ವಿವಿಧ ತಾಲೂಕುಗಳ ತಹಶೀಲ್ಧಾರ್‌ಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
Bakrid 2023: Monitor illegal animal slaughter in background of Bakrid: Udupi DC notice