ಮೀನು ಸಾಗಾಟ ವಾಹನದಲ್ಲಿ 12 ಟನ್ ಗೋಮಾಂಸ ಸಾಗಾಟ : ಮಂಗಳೂರಲ್ಲಿ ಭಜರಂಗದಳ ಕಾರ್ಯಕರ್ತರ ಕಾರ್ಯಾಚರಣೆ

ಮಂಗಳೂರು : ಮೀನು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ಬರೋಬ್ಬರಿ 12 ಟನ್ ಗೋ ಮಾಂಸ ಸಾಗಾಟ ಮಾಡುತ್ತಿದ್ದ ತಂಡವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮೀನು ಸಾಗಾಟ ಮಾಡುವ ಟ್ರಕ್ ನಲ್ಲಿ ಕೇರಳದಿಂದ ಮಂಗಳೂರಿಗೆ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿಯನ್ನು ಪಡೆದ ಭಜರಂಗದಳದ ಕಾರ್ಯಕರ್ತರು ಮಂಗಳೂರಿನ ಪಂಪ್ ವೆಲ್ ಬಳಿಯಲ್ಲಿ ಟ್ರಕ್ ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಹಿಂದೆ ಹಾಲಿನ ವಾಹನದಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ಭಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದರು. ಅದರ ಬೆನ್ನಲ್ಲೇ ಇದೀಗ ಬರೋಬ್ಬರಿ 12 ಟನ್ ಗೋ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

Comments are closed.