Belthangadi accident: ಕೈಕೊಟ್ಟ ಬ್ರೇಕ್‌ : ಶಬರಿಮಲೆ ಯಾತ್ರಾರ್ಥಿಗಳ ಬಸ್‌ ಗೆ ಅಪಘಾತ

ಬೆಳ್ತಂಗಡಿ: (Belthangadi accident) ನಿಯಂತ್ರಣ ತಪ್ಪಿದ ಮಿನಿ‌ಬಸ್ಸೊಂದು ಅಪಘಾತಕ್ಕೊಳಗಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಚಡವು ಉಳ್ಳಾಲ್ತಿ ಕಟ್ಟೆ ಬಳಿ ನಡೆದಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಬಂದಿದೆ. ಗಾಯಾಳುಗಳನ್ನು ಶಶಿ, ಜಲಾಧರ, ರಘು, ಬಸವರಾಜ್ ಮತ್ತು ಲೋಕ ಎಂದು ಗುರುತಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನಿಂದ ಇವರು ಶಬರಿಮಲೆಗೆ ಯಾತ್ರೆ ಹೊರಟವರಾಗಿದ್ದು ವಾಹನ(Belthangadi accident)ದಲ್ಲಿ ಒಟ್ಟು 21 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

Belthangadi accident: Brake failed: Sabarimala pilgrim bus accident

ಬಾಹನದ ಬ್ರೇಕ್ ಕೈ ಕೊಟ್ಟಿರುವುದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಅಪಘಾತ ನಡೆದ ಜಾಗ ಇಳಿಜಾರಾಗಿದ್ದು, ವಾಹನದ ಬ್ರೇಕ್ ಕೈ ಕೊಟ್ಟಿದೆ ಎಂದು ತಿಳಿದೊಡನೆಯೇ ಅದರ ಚಾಲಕ ವಾಹನವನ್ನು ರಸ್ತೆ ಪಕ್ಕದ ಪೊದೆಯ ಕಡೆಗೆ ಚಲಿಸುವಂತೆ ಮಾಡಿ ನಿಯಂತ್ರಣಕ್ಕೆ ತಂದಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಒಂದು ಕಡೆ ಆಳ ಕಂದಕ, ಇನ್ನೊಂದೆಡೆ ವಿದ್ಯುತ್ ಕಂಬ ಇದ್ದು ಸ್ವಲ್ಪ ಎಚ್ಚರ ತಪ್ಪಿದ್ದರೂ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.

ಅಪಘಾತವಾದ ವಿಚಾರ ತಿಳಿಯುತ್ತಿದ್ದಂತೆ ಮೂರ್ನಾಲ್ಕು ಆಂಬುಲೆನ್ಸ್‌ಗಳು ಅಗಮಿಸಿ, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಹಾಗೂ ಸ್ಥಳೀಯರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಚಿಕನ್ ಟಿಕ್ಕಾ ಮಸಾಲಾ ಸಂಶೋಧಕ ಅಹ್ಮದ್ ಅಸ್ಲಾಂ ಅಲಿ ನಿಧನ : ಅತ್ಯಂತ ಜನಪ್ರಿಯ ಭಕ್ಷ್ಯವನ್ನು ಕಂಡುಹಿಡಿದಿದ್ದು ಹೇಗೆ ?

ಇದನ್ನೂ ಓದಿ : ವರದಕ್ಷಿಣೆ ಆಸೆಗೆ ಮೂರು ತಿಂಗಳ ಗರ್ಭಿಣಿ ಪತ್ನಿಯನ್ನೇ ಬಲಿಕೊಟ್ಟ ಪತಿ

(Belthangadi accident) A minibus went out of control and many people were injured in an accident which took place near Kapu Chadavu Ullalti dam of Mundaje village in the taluk. It has been reported that the condition of two of the injured is critical. The injured have been identified as Shashi, Jaladhara, Raghu, Basavaraj and Lok.

Comments are closed.