Bengaluru weather: ಕರ್ನಾಟಕದಲ್ಲಿ 3 ದಿನ ಮಳೆ ಮುಂದುವರಿಕೆ : ಕರಾವಳಿ, ಮಲೆನಾಡಲ್ಲಿಂದು ಮಳೆ ಸಾಧ್ಯತೆ

ಬೆಂಗಳೂರು: (Bengaluru weather) ಕಳೆದ ಮೂರು ದಿನಗಳಿಂದಲೂ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಆದರೆ ಮಳೆ ಸದ್ಯಕ್ಕೆ ಬಿಡುವು ನೀಡುವ ಲಕ್ಷಣಗಳು ಗೋಚರಿಸುತ್ತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹಾಗೂ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನಲೆಯಲ್ಲಿ, ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು, ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇಂದು ರಾಜ್ಯದ ಹನ್ನೆರಡಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆ (Bengaluru weather)ಯಾಗುವ ಸಾಧ್ಯತೆಯಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಮೈಸೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ, ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಾಮರಾಜನಗರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದ್ದು, ಕೆಲು ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ : Karavali Rains: ಕರಾವಳಿಯಲ್ಲಿ ಭಾರೀ ಮಳೆ : ರಾಜ್ಯದಲ್ಲಿ 2ದಿನ ಮಳೆ ಮುಂದುವರಿಕೆ

ಇದನ್ನೂ ಓದಿ : Karnataka weather report today: ರಾಜ್ಯದಲ್ಲಿ ನ. 27ರ ವರೆಗೆ ಬಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕವಾದ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ, ಕಾರೈಕಲ್, ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಮಿಂಚು ಸಹಿತ ಮಳೆಯಾಗಲಿದೆ. 

(Bengaluru weather) It has been raining in most of the districts of the state including Coastal and Malenadu since last three days. But the rain shows no signs of respite for now. The Meteorological Department has given a forecast that rain will continue for three days in many districts of the state including Bengaluru.

Comments are closed.