Bommai temple run : ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ದೇಗುಲಗಳಿಗೆ ಸಿಎಂ ಬೊಮ್ಮಾಯಿ ಭೇಟಿ

ಬೆಳ್ತಂಗಡಿ : (Bommai temple run) ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಒಂದು ಹಂತದಲ್ಲಿ ಟಿಕೆಟ್‌ ಘೋಷಣೆಯಾಗಿದೆ. ಟಿಕೆಟ್‌ ಘೋಷಣೆ ಬೆನ್ನಲ್ಲೇ ಸಿಎಂ ಬೆಮ್ಮಾಯಿ ಅವರು ಟೆಂಪಲ್‌ ರನ್‌ ಗೆ ಸಿದ್ದವಾಗಿದ್ದಾರೆ. ದಕ್ಷಿಣ ಕನ್ನಡದ ವಿವಿಧ ದೇವಾಲಯಗಳಿಗೆ ಕುಟುಂಬಸಮೇತರಾಗಿ ಭೇಟಿ ನೀಡಲಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದು, ಇಂದು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡದ ವಿವಿಧ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಸದ್ಯ ಕುಟುಂಬಸಮೇತರಾಗಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು, ಮಂಜುನಾಥನ ದರ್ಶನ ಪಡೆಯಲಿದ್ದಾರೆ. ದೇವಾಲಯದಲ್ಲಿ ವಿಷೇಶ ಪೂಜೆ‌ ಸಲ್ಲಿಸಿದ ಬಳಿಕ ಧರ್ಮಸ್ಥಳದಿಂದ‌ ಕುಕ್ಕೆ‌ ಸುಬ್ರಹ್ಮಣ್ಯಕ್ಕೂ ಭೇಟಿ‌ ನೀಡಲಿದ್ದಾರೆ. ಇದಾದ ಬಳಿಕ ಗುರುವಾರ ಬೆಳಿಗ್ಗೆ ಕೊಲ್ಲೂರಿಗೆ ತೆರಳಲಿದ್ದು, ನಂತರ ಕಟೀಲು ಹಾಗೂ ಉಳ್ಳಾಲದ ಪುರಾಣ ಪ್ರಸಿದ್ದ ಸೋಮನಾಥ ದೇಗುಲಕ್ಕೂ ಭೇಟಿ ನೀಡಲಿದ್ದಾರೆ.

ಇನ್ನೂ ದಕ್ಷಿಣ ಕನ್ನಡದ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಿರುವ ಬೊಮ್ಮಾಯಿಗೂ ಕೂಡ ನೀತಿ ಸಂಹಿತೆಯಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕೀಯ ನಾಯಕರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇದಕ್ಕೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಕೂಡ ಹೊರತಲ್ಲ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಧರ್ಮಸ್ಥಳದಲ್ಲಿ ಅಧಿಕಾರಿಗಳ ತಂಡ ಬೊಮ್ಮಾಯಿ ಅವರ ಹೆಲಿಕಾಫ್ಟರ್‌ ಪರಿಶೀಲನೆ ನಡೆಸಿದ್ದು, ಹೆಲಿಕಾಫ್ಟರ್‌ ಹಾಗೂ ಸೂಟ್‌ ಕೇಸ್‌ ಅನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಟಿಕೆಟ್ ತಪ್ಪಿದ್ದಕ್ಕೆ ಕಣ್ಣೀರಿಟ್ಟ ಶಾಸಕ ರಘುಪತಿ ಭಟ್ : ಪಕ್ಷೇತರರಾಗಿ ಸ್ಪರ್ಧಿಸುತ್ತಾರಾ ಬಿಜೆಪಿ ಶಾಸಕ

ಇನ್ನೂ ಅಳೆದು ತೂಗಿ ಜನರಲ್ಲಿ ಅಭ್ಯರ್ಥಿಗಳಲ್ಲಿ ಕುತೂಹಲ ಮೂಡಿಸಿ ಕೊನೆಗೂ ನಿನ್ನೆ ರಾತ್ರಿ ಬಿಜೆಪಿ ಟಿಕೆಟ್‌ ಬಿಡುಗಡೆಯಾಗಿತ್ತು. 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್​ ನೀಡಿದ್ದು, ಒಬಿಸಿಯ 32 ಮಂದಿ, ಎಸ್​ಸಿ 30, ಎಸ್​ಟಿ 16 ಹಾಗೂ 9 ವೈದ್ಯರು, ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಟಿಕೆಟ್ ನೀಡಲಾಗಿದೆ. 8 ಮಂದಿ ಮಹಿಳೆಯರು, ಐವರು ವಕೀಲರು, ಮೂವರು ಶಿಕ್ಷಕರು, 9 ಸ್ನಾತಕೋತ್ತರ ಪದವೀಧರರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ. ಇನ್ನೂ ಹಲವು ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿದ್ದು, ಪುತ್ರರಿಗೆ ಟಿಕೆಟ್‌ ನೀಡುವಂತೆ ಹೇಳಿದವರಿಗೂ ಕೂಡ ಟಿಕೆಟ್‌ ಕೈ ತ್ಪಪಿದೆ. ಈ ಕಾರಣಕ್ಕೆ ರಾಜ್ಯದಲ್ಲಿ ಬಿಜೆಪಿ ಪಕ್ಷದಲ್ಲೇ ಬಂಡಾಯದ ಬಿಸಿಯೇರಿದೆ. ಇದೀಗ ಟಿಕೆಟ್‌ ಪಟ್ಟಿ ಘೋಷಣೆ ಹಾಗೂ ಬಂಡಾಯ ಬಿಸಿ ಏರಿದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಿದ್ದು, ಚುನಾವಣೆ ಸಂಬಂಧ ದೇವರ ಮೊರೆ ಹೋಗಿದ್ದಾರೆ.

Bommai temple run: CM Bommai visited many temples including Dharmasthala Kukke Subrahmanya

Comments are closed.