ಬ್ರಹ್ಮಾವರ : ಕಾರು ಹಾಗೂ ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಟೆಂಪೋ ಡಿವೈಡರ್ ಮೇಲೇರಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಡುಪಿ ಕಡೆಯಿಂದ ಬರುತ್ತಿದ್ದ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಗೆ ಸಾಗಿದೆ. ಈ ವೇಳೆಯಲ್ಲಿ ಕುಂದಾಪುರ ಕಡೆಯಿಂದ ಬರುತ್ತಿದ್ದ ಟೆಂಪೋಗೆ ಢಿಕ್ಕಿಯಾಗಿದೆ. ಈ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಡಿವೈಡರ್ ಮೇಲೆರಿದೆ. ಇದೇ ವೇಳೆಯಲ್ಲಿ ರಸ್ತೆಯಲ್ಲಿ ಬರುತ್ತಿದ್ದ ಬೈಕಿಗೆ ಕಾರು ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಟೆಂಪೋವನ್ನು ತೆರವುಗೊಳಿಸಲಾಗಿದೆ. ಅದೃಷ್ಟವಾಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.