ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಅಕ್ಷಯ್ ಶ್ರೀಧರ್ ವರ್ಗಾವಣೆ ಆಗಿದ್ದು, ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ. (Channabasappa K.)ಅವರನ್ನು ನೇಮಕ ಮಾಡಲಾಗಿದೆ.
ಕಳೆದೆರಡು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಕ್ಷಯ್ ಶ್ರೀಧರ್ ಅವರು ಕಾರ್ಯನಿರ್ವಹಿಸಿದ್ದರು. ಇದೀಗ ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಆದ ಅಕ್ಷಯ್ ಶ್ರೀಧರ್ ಅವರನ್ನು ವರ್ಗಾವಣೆಗೊಳಿಸಿವಂತೆ ಸರಕಾರ ಆದೇಶ ಹೊರಡಿಸಿದೆ. ಹಾಗಾಗಿ ಈ ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ತುಮಕೂರು ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಕೆ ಅವರನ್ನು ನೇಮಕ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ : Mulki car accident: ಲಾರಿ ದುರಸ್ತಿ ವೇಳೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವನಿಗೆ ಗಾಯ
ಇದನ್ನೂ ಓದಿ : Mangalore Civil strike: ಮಂಗಳೂರು : ಇಂದಿನಿಂದ ಪೌರಕಾರ್ಮಿಕ ಮುಷ್ಕರ : ತ್ಯಾಜ್ಯ ವಿಲೇವಾರಿ, ನೀರು ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ
ಆಗಸ್ಟ್ 2020 ರಂದು ಬೀದರ್ ಉಪ ವಿಭಾಗದ ಅಸಿಸ್ಟೆಂಟ್ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಕ್ಷಯ್ ಶ್ರೀಧರ್ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ಕಮೀಷನರ್ ಆಗಿ ನೇಮಕ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದು, ಇಂದು (ಫೆಬ್ರವರಿ 2)ರಂದು ಅವರ ಜಾಗಕ್ಕೆ ಚನ್ನಬಸಪ್ಪ ಕೆ ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ : Beltangadi Auto accident: ಸೇತುವೆ ಗೋಡೆಗೆ ಆಟೋ ರಿಕ್ಷಾ ಢಿಕ್ಕಿ: 1.2 ವರ್ಷದ ಮಗು ಸಾವು, ಮೂವರಿಗೆ ಗಾಯ
ಇದನ್ನೂ ಓದಿ : ಮಂಗಳೂರು: ಅತಿಯಾಗಿ ಮೊಬೈಲ್ ಬಳಸುತ್ತಿದ್ದಕ್ಕೆ ಬೈದ ತಾಯಿ: ಮನನೊಂದು ನೇಣಿಗೆ ಶರಣಾದ ಬಾಲಕ
ಇದನ್ನೂ ಓದಿ : Lorry driver death: ಅನುಮಾನಸ್ಪದ ರೀತಿಯಲ್ಲಿ ಲಾರಿ ಚಾಲಕ ಸಾವು: ಇನ್ನೋರ್ವ ಚಾಲಕನೇ ಕೊಲೆ ಮಾಡಿರುವ ಶಂಕೆ
Channabasappa K. appointed as new Commissioner of Mangalore Municipal Corporation