Child Protection Committee meeting : ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಡಾ. ತಿಪ್ಪೇಸ್ವಾಮಿ

ಉಡುಪಿ : (Child Protection Committee meeting) ಮಕ್ಕಳ ಹಕ್ಕುಗಳ ರಕ್ಷಣೆ ಸೇರಿದಂತೆ ಅವುಗಳ ಅನುಷ್ಠಾನ ಮಾಡುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಡಾ. ತಿಪ್ಪೇಸ್ವಾಮಿ ಕೆ.ಟಿ ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಿದ್ದಾರೆ.

ಶಾಲಾ-ಕಾಲೇಜುಗಳು ಸೇರಿದಂತೆ ಹಾಸ್ಟೆಲ್‌ಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ತಪ್ಪದೇ ಜಾರಿಗೊಳಿಸುವುದರೊಂದಿಗೆ, ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಶಾಲಾ-ಕಾಲೇಜು ವಸತಿ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಹಾಯವಾಣಿ 112 ಹಾಗೂ 1098 ಅನ್ನು ಗೋಡೆಯ ಮೇಲೆ ಕಡ್ಡಾಯವಾಗಿ ನಮೂದಿಸಬೇಕು ಎಂದು ಹೇಳಿದರು. ಇದರಿಂದಾಗಿ ಗ್ರಾಮ ಮಟ್ಟಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ, ಮಹಿಳೆ ಮತ್ತು ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಶಿಕ್ಷಣ ಸಮಿತಿಗಳನ್ನು ರಚಿಸಬೇಕು. ಪ್ರತೀ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಮಕ್ಕಳ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಅವುಗಳನ್ನು ಬಗೆಹರಿಸಬೇಕು ಎಂದು ಹೇಳಿದರು.

ಇನ್ನು ಶಾಲೆಯಿಂದ ಯಾವುದೇ ಮಕ್ಕಳು ಹೊರ ಉಳಿಯದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಶಿಕ್ಷಣ ಇಲಾಖೆ, ಸ್ಥಳೀಯ ಸಂಸ್ಥೆಗಳು ಕಾರ್ಯಪ್ರವೃತ್ತರಾಗಿರಬೇಕು ಎಂದಿದ್ದಾರೆ. ಶಾಲಾ ಆವರಣಗಳಲ್ಲಿ ವಿದ್ಯುತ್ ತಂತಿಯ ಮಾರ್ಗಗಳು ಇರುವ ಬಗ್ಗೆ ಜಿಲ್ಲಾ ಮಟ್ಟದಲ್ಲಿ ವರದಿಯನ್ನು ನೀಡಬೇಕು, ಅಷ್ಟೇ ಅಲ್ಲದೇ ಇವುಗಳ ತೆರವಿಗೂ ಸಹ ಮುಂದಾಗಬೇಕು ಎಂದು ಹೇಳಿದರು. ಸಮಾಜದಲ್ಲಿನ ಅನಿಷ್ಠ ಪದ್ಧತಿಯಾದ ಬಾಲ್ಯ ವಿವಾಹಗಳು ಎಲ್ಲೂ ನಡೆಯದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು

ಹಾಗೆಯೇ ಪ್ರೌಢಶಾಲಾ ಮಟ್ಟದಲ್ಲಿ ಮಕ್ಕಳು ಪ್ರೀತಿ-ಪ್ರೇಮಗಳು ನಡೆಯದಂತೆ ಕಡಿವಾಣ ಹಾಕಬೇಕು ಎಚ್ಚರಿಕೆ ನೀಡಿದ್ದಾರೆ. ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗದಂತೆ ಫೋಕ್ಸೋ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದಿದ್ದಾರೆ. ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಪ್ರಕರಣಕ್ಕೆ ಒಳಗಾದವರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಆದ್ಯತೆ ಮೇಲೆ ನೀಡಬೇಕು. ಪ್ರತೀ ಶಾಲೆಯಲ್ಲೂ ಮಕ್ಕಳ ಹಕ್ಕುಗಳ ಕ್ಲಬ್‌ಗಳನ್ನು ರಚಿಸುವುದರೊಂದಿಗೆ ವಿದ್ಯಾರ್ಥಿಗಳು ಅದರಲ್ಲಿ ಸಕ್ರೀಯವಾಗಿ ಭಾಗವಹಿಸಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಣ ಇಲಾಖೆಯದ್ದಾಗಿದೆ, ವಿದ್ಯಾರ್ಥಿಗಳಿಗೆ ಶಾಲಾ- ಶುಲ್ಕಗಳನ್ನು ಕಟ್ಟಿಲ್ಲ ಎಂಬ ಕಾರಣದಿಂದ ವರ್ಗಾವಣೆ ಪತ್ರವನ್ನು ತಡೆಹಿಡಿಯದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : Malpe Beach – Udupi : ಮಲ್ಪೆ ಬೀಚ್‌ನಲ್ಲಿ ಪತ್ತೆಯಾಯ್ತು ನೂಡಲ್ಸ್‌ ಮಾದರಿಯ ವಸ್ತುಗಳು : ಅಧ್ಯಯನಕ್ಕಾಗಿ ಮಾದರಿ ಕೊಚ್ಚಿ, ಗೋವಾಕ್ಕೆ ರವಾನೆ

ಇದನ್ನೂ ಓದಿ : Kaukradi PDO Mahesh G.N. : ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಕೌಕ್ರಾಡಿ ಪಿಡಿಒ

ಇನ್ನು ಈಗ ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಪೊಲೀಸ್ ಉಪ ಅಧೀಕ್ಷಕ ದಿನಕರ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Child Protection Committee meeting: Protection of children’s rights is everyone’s duty: Dr. Tippeswamy

Comments are closed.