ಉಡುಪಿ : ಮಕ್ಕಳ ದಿನಾಚರಣೆಯನ್ನು (Children’s Day Special) ಒಂದೊಂದು ಕಡೆ, ಒಂದೊಂದು ರೀತಿಯಲ್ಲಿ ಆಯೋಜನೆ ಮಾಡಲಾಗುತ್ತೆ. ನೃತ್ಯ, ಸಂಗೀತ ಕಾರ್ಯಕ್ರಮಗಳು ಸರ್ವೆ ಸಾಮಾನ್ಯ. ಆದ್ರೆ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಗಿರಿಫ್ರೆಂಡ್ಸ್ ಚಿತ್ರಪಾಡಿ ವಿಶಿಷ್ಟವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಿದೆ. ಪುಟಾಣಿ ಮಕ್ಕಳಿಗೆ ಚಿತ್ರಕಲೆ ಹಾಗೂ ಪೋಷಕರಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಿದೆ. ಪುಟಾಣಿ ಮಕ್ಕಳು ಬಿಡಿಸಿದ ಚಿತ್ರಕಲೆ ಎಲ್ಲರ ಗಮನ ಸೆಳೆದಿದೆ. ಇನ್ನು ಪೋಷಕರಂತೂ ಭಿನ್ನ, ವಿಭಿನ್ನ ರಂಗೋಲಿ ಬಿಡಿಸುವ ಮೂಲಕ ಸಂಭ್ರಮಿಸಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದಲ್ಲಿರುವ ಚಿತ್ರಪಾಡಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡ ಚಿತ್ರಕಲೆ ಸ್ಪರ್ಧೆಯಲ್ಲಿ ಒಂದರಿಂದ ನಾಲ್ಕನೇ ತರಗತಿಯ ಮಕ್ಕಳಿಗೆ ಪರಿಸರಕ್ಕೆ ಸಂಬಂಧಪಟ್ಟ ಚಿತ್ರವನ್ನು ಬಿಡಿಸಲು ಹೇಳಲಾಗಿದೆ. ಅದಕ್ಕೆ ತಕ್ಕಂತೆ ಚಿಕ್ಕ ಮಕ್ಕಳು ತಮ್ಮ ಪುಟ್ಟ ಕೈಯಲಿ ಪರಿಸರಕ್ಕೆ ಸಂಬಂಧಪಟ್ಟಂತೆ ಬೆಟ್ಟಗುಡ್ಡ, ಸೂರ್ಯ, ನದಿ, ಕೊಳ್ಳ ಸೇರಿದಂತೆ ಅನೇಕ ಚಿತ್ರಗಳನ್ನು ಸುಂದರವಾಗಿ ಚಿತ್ರಿಸಿದ್ದಾರೆ. ಇನ್ನೂ ಆರರಿಂದ ಏಳನೇ ತರಗತಿಯ ಮಕ್ಕಳಿಗೆ ನಟ ಪುನೀತ್ ರಾಜ್‌ಕುಮಾರ್ ಚಿತ್ರವನ್ನು ಬಿಡಿಸಲು ಹೇಳಿದ್ದಾರೆ. ಅದರಂತೆ ಮಕ್ಕಳು ತಮ್ಮ ಕೈಯಿಂದ ನಟನ ಅದ್ಭುತ ಚಿತ್ರವನ್ನು ಬಿಡಿಸಿದ್ದಾರೆ. ಹಾಗೆ ಮಕ್ಕಳ ಪೋಷಕರಿಗೆ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅವರು ಕೂಡ ತಮ್ಮ ಮಕ್ಕಳ ಜೊತೆಯಲಿ ನಾವು ಕಮ್ಮಿ ಇಲ್ಲ ಎನ್ನುವಂತೆ ಬಣ್ಣ ಬಣ್ಣದ ರಂಗೋಲಿಯನ್ನು ಬಿಡಿಸಿದ್ದಾರೆ.
ಇದನ್ನೂ ಓದಿ : Chithrapady Children Santhe : ಮಕ್ಕಳ ದಿನಾಚರಣೆ : ಚಿತ್ರಪಾಡಿ ಶಾಲೆಯಲ್ಲಿ ಗಮನ ಸೆಳೆದ ಮಕ್ಕಳ ಸಂತೆ
ಇದನ್ನೂ ಓದಿ : Children’s Day : ಮಕ್ಕಳಿಗಾಗಿ ನರ್ತಿಸಿದ ಶಿಕ್ಷಕರು : ಹೀಗೊಂದು ವಿಶಿಷ್ಟ ಮಕ್ಕಳ ದಿನಾಚರಣೆ
ಸರಕಾರಿ ಶಾಲೆಗಳ ಬೆಳವಣೆಗೆ ಹಾಗೂ ಮಕ್ಕಳ ಜ್ಞಾನ ಬೆಳವಣೆಗೆಗೆ ಪೂರಕವಾದ ಶಿಕ್ಷಣವನ್ನು ಕೊಡಿಸುವುದು ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ. ಪುಸ್ತಕದೊಳಗಿನ ಜ್ಞಾನವಷ್ಟೇ ಅಲ್ಲದೇ ಪ್ರಪಂಚದ ಜ್ಞಾನವನ್ನು ಬೆಳೆಸುವುದು ಅಷ್ಟೇ ಮುಖ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸರಕಾರಿ ಶಾಲೆಗಳು ಖಾಸಗಿ ಶಾಲೆ ಸರಿ ಸಮವಾಗಿ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಗೊಳ್ಳುತ್ತಿದೆ. ಮಕ್ಕಳಲ್ಲಿ ಕಲೆ ಹಾಗೂ ಸಾಹಿತ್ಯದ ಜ್ಞಾನವನ್ನು ಹೆಚ್ಚಿಸಲು ಪ್ರತಿಭಾ ಕಾರಂಜಿ, ವಾರ್ಷಿಕೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿ ಮಕ್ಕಳಲ್ಲಿ ಸ್ಪರ್ಧಾ ಮನೋಭಾವವನ್ನು ಹೆಚ್ಚಿಸಿದ್ದಾರೆ. ಹೆಚ್ಚಿನ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಕಲಾ ಜ್ಞಾನವನ್ನು ಹೆಚ್ಚಿಸಿಕೊಂಡಿದ್ದಾರೆ. ಮಕ್ಕಳೊಂದಿಗೆ ಪೋಷಕರು ಭಾಗವಹಿಸಿ ಮಕ್ಕಳಿಗೆ ಪ್ರೋತ್ಸಾಹಿಸಿದ್ದಾರೆ.
Children’s Day Special : Painting by toddlers, Rangoli by parents: Unique Children’s Day celebration by Giri Friends Chitrapadi