Bommai high level meeting : ಸಿಎಂ ನೇತೃತ್ವದಲ್ಲಿ ಪೊಲೀಸ್​ ಹಿರಿಯ ಅಧಿಕಾರಿಗಳ ಸಭೆ : ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಕಟ್ಟು ನಿಟ್ಟಿನ ಕ್ರಮ ಸಾಧ್ಯತೆ

ಮಂಗಳೂರು : Bommai high level meeting : ಕರಾವಳಿಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಲು ಸಾಲು ಕೊಲೆ ಪ್ರಕರಣಗಳು ರಾಜ್ಯ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಪೊಲೀಸ್ ಇಲಾಖೆಯ ಭದ್ರತೆಯ ಬಳಿಕವೂ ನಡು ರಸ್ತೆಗಳಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಹತ್ಯೆಗಳು ಸಾಮಾನ್ಯ ಜನತೆಗೆ ತಮ್ಮ ಧರ್ಮದ ಬಗ್ಗೆ ಬಹಿರಂಗವಾಗಿ ಮಾತನಾಡಲಿಕ್ಕೂ ಭಯ ಹುಟ್ಟಿಸುವಂತೆ ಮಾಡಿದೆ. ನಿನ್ನೆ ಮಂಗಳೂರಿನಲ್ಲಿ ಮೂರನೇ ಕೊಲೆಯಾದ ಬಳಿಕ ಪರಿಸ್ಥಿತಿ ಕೈ ಮೀರುತ್ತಿದೆ ಎಂಬುದು ಸಿಎಂ ಬಸವರಾಜ ಬೊಮ್ಮಾಯಿ ಗಮನಕ್ಕೂ ಬಂದಿರುವಂತೆ ಕಾಣುತ್ತಿದೆ.


ನಿನ್ನೆ ಹಿಂದೂ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ನಿವಾಸಕ್ಕೆ ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಇರುವಾಗಲೇ ಸುರತ್ಕಲ್​ನಲ್ಲಿ ಜನನಿಬಿಡ ಪ್ರದೇಶದಲ್ಲಿಯೇ ಫಾಜಿಲ್​ ಎಂಬ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಕರಾವಳಿ ಜಿಲ್ಲೆಯಲ್ಲಿ ಈ ರೀತಿ ಸಾಲು ಸಾಲು ಕೊಲೆಗಳು ಆಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸ್​ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಸಭೆ ಕರೆದಿದ್ದಾರೆ.
ಪೊಲೀಸ್​ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ ಬಸವರಾಜ ಬೊಮ್ಮಾಯಿ ಕಳೆದ 10 ದಿನಗಳಲ್ಲಿ ನಡೆದ ಮೂರು ಕೊಲೆ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಲಿದ್ದಾರೆ. ಅಲ್ಲದೇ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.


ಇನ್ನು ಈ ಕೊಲೆ ಪ್ರಕರಣಗಳ ವಿಚಾರವಾಗಿ ಮಂಗಳೂರಿನಲ್ಲಿ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್, ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದೇವೆ. ವಿವಿಧ ಆಯಾಮಗಳಲ್ಲಿ ಈ ಮೂರು ಕೊಲೆ ಪ್ರಕರಣಗಳ ತನಿಖೆ ನಡೆಯುತ್ತಿದೆ.ಕರಾವಳಿ ಜಿಲ್ಲೆಗಳಿಗೆ ಈಗಿರುವ ಬಂದೋಬಸ್ತ್​ ಮುಂದುವರಿಯಲಿದೆ. ಗಡಿಭಾಗದಲ್ಲಿ ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗ್ತಿದೆ. ಸಾರ್ವಜನಿಕರು ಪೊಲೀಸರಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿ : Siddaramaiah : ಬಸವರಾಜ ಬೊಮ್ಮಾಯಿಯನ್ನು ದುರ್ಬಲ ಮುಖ್ಯಮಂತ್ರಿ ಎಂದು ಕರೆದ ಸಿದ್ದರಾಮಯ್ಯ

ಇದನ್ನೂ ಓದಿ : CM Basavaraja Bommai : ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಗುಡುಗಿದ ಸಿಎಂ ಬಸವರಾಜ ಬೊಮ್ಮಾಯಿ

CM Basavaraja Bommai high level meeting with senior police officers

Comments are closed.