ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದಲೂ ಉತ್ತಮ ಮಳೆಯಾಗುತ್ತಿದೆ. ಅಲ್ಲದೇ ಕರಾವಳಿ ಭಾಗಗಳಲ್ಲಿ ಕಳೆದೆರಡು ದಿನಗಳಿಂದಲೂ ಮಳೆಯ ಅಬ್ಬರ ಜೋರಾಗಿದೆ. ನಾಳೆ ಭಾರಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ರಾಜ್ಯದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅಲ್ಲದೇ ಭಾರಿ ಮಳೆಯ ಹಿನ್ನೆಲೆಯಲ್ಲಿ ಜೂನ್ 17ರ ವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಲಬುರಗಿ, ಬೀದರ್, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಹಾವೇರಿ, ಗದಗ ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಜೂನ್ 14ರಿಂದ ಜೂನ್ 16ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.