Coastal weather: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಿಂಚು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: (Coastal weather) ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು ಚಳಿಯ ವಾತಾವರಣ ಹೆಚ್ಚಾಗಿದ್ದು, ಇಂದು ಚಳಿಯ ಜೊತೆಗೆ ಮಳೆಯಾಗಲಿದೆ.

ಡಿಸೆಂಬರ್ 4ರಂದು ಅಂಡಮಾನ್ ದ್ವೀಪದ ದಕ್ಷಿಣ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಲಿದೆ. ಡಿಸೆಂಬರ್ 5ರಂದು ಅದೇ ಪ್ರದೇಶದ ಸಮುದ್ರಮಟ್ಟದಲ್ಲಿ ವಾಯುಭಾರ ಕುಸಿತವಾಗಲಿದೆ. ಡಿಸೆಂಬರ್ 8ರ ಸುಮಾರಿಗೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನ ಕರಾವಳಿಗೆ (Coastal weather) ಮಳೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರಿನಲ್ಲಿ ಡಿ. 14ರವರೆಗೆ ಮೋಡ ಕವಿದ ವಾತಾವರಣವಿರಲಿದ್ದು, ಮಳೆ ಹೆಚ್ಚಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಧಾರಾಕಾರ ಮಳೆಯಾಗಲಿದೆ. ಇಂದು ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 5ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೊಂದು ಸುತ್ತಿನ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿ. 5ರಿಂದ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : Karnataka Weather report: ಕರಾವಳಿಯಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಇದನ್ನೂ ಓದಿ : Series Accident: ಗಾಂಜಾ ನಶೆಯಲ್ಲಿ ಡ್ರೈವಿಂಗ್, ಸರಣಿ ಅಪಘಾತ ನಡೆಸಿ ಎಸ್ಕೇಪ್ :12kM ಚೇಸಿಂಗ್ ಮಾಡಿ ಚಾಲಕನ ಸೆರೆ ಹಿಡಿದ ಸ್ಥಳೀಯರು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

(Coastal weather) Rainfall will increase in the coastal and southern inland districts including Bengaluru, and there will be rain with lightning, according to the Meteorological Department. Since last two days rain has decreased in Bengaluru and cold weather has increased and today it will rain along with cold weather.

Comments are closed.