Commissioner N Sasikumar: ದಕ್ಷಿಣ ಕನ್ನಡ: ಪೊಲೀಸ್ ಕಮಿಷನರ್‌ ಎನ್‌ ಶಶಿಕುಮಾರ್‌ ವರ್ಗಾವಣೆ

ಮಂಗಳೂರು: (Commissioner N Sasikumar) ನಗರ ಪೊಲೀಸ್‌ ಆಯುಕ್ತ ಎನ್‌ ಶಶಿಕುಮಾರ್‌ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರನ್ನು ರೈಲ್ವೇ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ.

ಮಂಗಳೂರು ನಗರ ನೂತನ ಪೊಲೀಸ್‌ ಆಯುಕ್ತರ ಹುದ್ದೆಗೆ ಕುಲದೀಪ್‌ ಕುಮಾರ್‌ ಆರ್.‌ ಜೈನ್‌ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್‌ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ. ಶಶಿಕುಮಾರ್‌ ಸೇರಿದಂತೆ ಏಳು ಮಂದಿ ಐಪಿಎಸ್‌ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ಬೆಂಗಳೂರು ವೈರ್‌ ಲೆಸ್‌ ಎಸ್‌ ಪಿಯಾಗಿದ್ದ ಡಿ. ಕಿಶೋರ್‌ ಬಾಬು ಅವರನ್ನು ಗುಪ್ತದಳ ಪೊಲೀಸ್‌ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.

ಕೆಎಸ್‌ ಆರ್‌ ಪಿ ಬೆಂಗಳೂರು ಕಮಾಂಡೆಂಟ್‌ ಅಗಿರುವ ಕೆ. ವಂಶಿಕೃಷ್ಣ ಅವರನ್ನು ಬೆಂಗಳೂರು ವೈರ್‌ ಲೆಸ್‌ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮುಹಮ್ಮದ್‌ ಸುಜೀತಾ ಎಂ.ಎಸ್‌ ಅವರನ್ನು ಬೆಂಗಳೂರು ಸಿಎಆರ್‌ ಡಿಸಿಪಿಯಿಂದ ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕೊಪ್ಪಳ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಅರುಣಾಂಶುಗಿರಿ ಅವರನ್ನು ಸಿಎಆರ್‌ ಬೆಂಗಳೂರು ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ಲೋಕಾಯುಕ್ತ ಎಸ್.‌ ಪಿ ಯಶೋಧಾ ವಂಟಗೋಡಿ ಅವರನ್ನು ಮಂಡ್ಯ ಪೊಲೀಸ್‌ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.

ಇದನ್ನೂ ಓದಿ : Praveen Nettaru murder case: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್‌ ಎನ್‌ಐಎ ವಶಕ್ಕೆ

ಇದನ್ನೂ ಓದಿ : “E Guru” training: ಕುಂದಾಪುರ: ಪಿಯು ವಿದ್ಯಾರ್ಥಿಗಳಿಗೆ “ಇ ಗುರು” ತರಬೇತಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್‌ ಎನ್‌ಐಎ ವಶಕ್ಕೆ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್‌ ಐಎ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಕಮ್ಯುನಿಟಿ ಹಾಲ್‌ ಅನ್ನು ವಶಕ್ಕೆ ಪಡೆದುಕೊಂಡಿದೆ. ಉಗ್ರ ಕೃತ್ಯಗಳಿಗೆ ಈ ಹಾಲ್‌ ಅನ್ನು ಬಳಸಿಕೊಂಡು ಭಯೋತ್ಪಾದಕ ತರಬೇತಿ ನೀಡಲು ಹಾಲ್‌ ಅನ್ನು ಬಳಸಿಕೊಳ್ಳಲಾಗುತ್ತಿತ್ತು ಎಂಬ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದುಕೊಂಡಿರುವುದಾಗಿ ಆದೇಶದಲ್ಲಿ ತಿಳಿಸಿದೆ. ಜುಲೈ ೨೭ ರಂದು ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಕೈಗೆತ್ತಿಕೊಂಡ ರಾಷ್ಟ್ರೀಯ ತನಿಖಾ ದಾಳ ಹಲವರನ್ನು ಬಂಧಿಸಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ತರಬೇತಿ ನೀಡಲು ಬಳಸುತ್ತಿದ್ದ ಬಂಟ್ವಾಳ ತಾಲೂಕಿನ ಇಡುಕ್ಕಿ ಗ್ರಾಮದ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್‌ ಅನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದುಕೊಂಡಿದೆ. ಇದು ಉಗ್ರ ಚಟುವಟಿಕೆಯ ಕೇಂದ್ರ ಬಿಂದುವಾಗಿದೆ ಎಂದು ಎನ್‌ಐಎ ಚಾರ್ಜ್‌ ಶೀಟ್‌ ನಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ : Mangaluru student died: ಆಟೋ ಚಾಲಕನ ನಿರ್ಲಕ್ಷ್ಯ: ಜೀವ ಕಳೆದುಕೊಂಡ ವಿದ್ಯಾರ್ಥಿ

Commissioner N Sasikumar: Dakshina Kannada: Police Commissioner N Sasikumar transferred

Comments are closed.