Constable committed suicide: ಕುಂದಾಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕುಂದಾಪುರ: (Constable committed suicide) ಕುಂದಾಪುರದ ಪೊಲೀಸ್‌ ಠಾಣೆಯ ಕಾನ್ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಇಕೋ ಬೀಚ್‌ ಬಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ಮೂಲದ ರಾಮ ಗೌಡ (32 ವರ್ಷ) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಸಿಬ್ಬಂದಿ.

ಮೃತ ರಾಮಗೌಡ ಅವರು ಆನ್‌ ಲೈನ್‌ ಬೆಟ್ಟಿಂಗ್‌ ವಿಚಾರದಲ್ಲಿ ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕೆ ಮನನೊಂದು, ಅಥವಾ ಸಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಮೊಬೈಲ್‌ ಸ್ವಿಚ್ ಆಫ್‌ ಮಾಡಿ ಠಾಣೆಯ ಕರ್ತವ್ಯಕ್ಕೆ ಗೈರಾಗಿದ್ದರು. ಈ ಬಗ್ಗೆ ಇಲಾಖಾ ಮಟ್ಟದಲ್ಲಿ ಕೂಡ ಆತನನ್ನು ಪತ್ತೆ ಮಾಡುವ ಕಾರ್ಯ ಕೂಡ ನಡೆಸಲಾಗಿತ್ತೆನ್ನಲಾಗಿದೆ.

ಆದರೆ ಇಂದು ಕಾನ್ಸ್ಟೇಬಲ್‌ ಮೃತದೇಹ ಸಮುದ್ರ ತೀರದ ಪಾರ್ಕ್‌ ಪ್ರದೇಶದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಮೀಪದಲ್ಲಿ ಬ್ಯಾಗ್‌ ಕೂಡ ದೊರೆತಿದೆ. ಈ ಬಗ್ಗೆ ಸ್ಥಳೀಯರು ಹೊನ್ನಾವರ ಪೊಲೀಸರಿಗೆ ಮಾಹಿತಿ ನೀಡಿದ್ದು, ಹೊನ್ನಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣಕ್ಕೆ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

ಮೃತ ರಾಮಗೌಡ ಅವರು 2012 ರಲ್ಲಿ ಪೊಲೀಸ್‌ ಇಲಾಖೆಗೆ ನೇಮಕಗೊಂಡಿದ್ದು, ಕಳೆದ ಐದು ವರ್ಷದಿಂದ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಕಾನ್ಸ್ಟೇಬಲ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದಲ್ಲದೇ ಇವರು ಉತ್ತಮ ವಾಲಿಬಾಲ್‌ ಆಟಗಾರನಾಗಿದ್ದು, ಇತ್ತೀಚೆಗೆ ಸದಾ ಒಂಟಿಯಾಗಿರುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ : Threatening call for mumbai airport: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ : ಹೈಅಲರ್ಟ್ ಘೋಷಣೆ

ಭೂಕಂಪಕ್ಕೆ ತತ್ತರಿಸಿದ ಟರ್ಕಿ: ಕಳೆದ 24 ಗಂಟೆಯಲ್ಲಿ ನಾಲ್ಕನೇ ಬಾರಿ 5.6 ತೀವ್ರತೆಯ ಭೂಕಂಪ

ನಿನ್ನೆಯಷ್ಟೇ ಟರ್ಕಿ ಭೂಕಂಪಕ್ಕೆ ತುತ್ತಾಗಿದ್ದು, ಸಾವಿರಾರು ಕಟ್ಟಡಗಳು ನೆಲಕ್ಕುರುಳಿವೆ. ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಮಧ್ಯೆ ಟರ್ಕಿಯಲ್ಲಿ ಕಳೆದ 24 ಗಂಟೆಗಳಲ್ಲಿ ಸತತ ನಾಲ್ಕನೇ ಬಾರಿ ಟರ್ಕಿ ಭೂಕಂಪಕ್ಕೆ ಸಾಕ್ಷಿಯಾಗಿದ್ದು, ಮಧ್ಯ ಟರ್ಕಿ ಪ್ರದೇಶದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಇದನ್ನೂ ಓದಿ : Kerala student died: ಚಲಿಸುತ್ತಿದ್ದ ಬಸ್‌ ನಿಂದ ಬಿದ್ದು ವಿದ್ಯಾರ್ಥಿ ಸಾವು

ಇದನ್ನೂ ಓದಿ : Mother killed her children: ತನ್ನ ಎರಡು ಮಕ್ಕಳನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ

Constable committed suicide: Constable of Kundapur police station committed suicide by hanging himself

Comments are closed.