ಕೊರೊನಾ ಆರ್ಭಟ :  ಉಡುಪಿ, ದಕ್ಷಿಣ ಕನ್ನಡಕ್ಕೆ ಹೊಸ ಮಾರ್ಗಸೂಚಿ : ಯಾವುದಕ್ಕೆ ನಿರ್ಬಂಧ ಗೊತ್ತಾ ?

ಉಡುಪಿ/ ಮಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 8 ಜಿಲ್ಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

6 ರಿಂದ 9ನೇ ತರಗತಿಯ ವಿದ್ಯಾಗಮ ಶಾಲೆಗಳನ್ನು, ಬಾರ್, ರೆಸ್ಟೋರೆಂಟ್, ಪಬ್, ಕ್ಲಬ್ ಗಳನ್ನು ಬಂದ್ ಮಾಡಲಾಗುವುದು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ರಾಜ್ಯಾದ್ಯಂತ ಸ್ವಿಮ್ಮಿಂಗ್ ಪೂಲ್, ಜಿಮ್ ಗೆ ನಿರ್ಬಂಧ ಹೇರಲಾಗಿದೆ.

ಇದು ಎಪ್ರಿಲ್ 20ರ ವರೆಗೆ ಜಾರಿಯಲ್ಲಿರಲಿದೆ. ಸ್ವಿಮ್ಮಿಂಗ್ ಪೂಲ್, ಜಿಮ್ ಗೆ ನಿರ್ಬಂಧ ಹೇರಲಾಗಿದೆ. ಗುಂಪು ಸೇರುವಂತಿಲ್ಲ. ಕಾರ್ಯಕ್ರಮ ಆಯೋಜನೆ ಮಾಡುವಂತಿಲ್ಲ. ಪ್ರತಿಭಟನೆ, ಜಾಥಾಗಳಿಗೆ ಅವಕಾಶವಿಲ್ಲ ದೇವಾಲಯ, ಪ್ರಾರ್ಥನಾ ಮಂದಿರದಲ್ಲಿ ವೈಯುಕ್ತಿಕ ಪ್ರಾರ್ಥನೆಗಳಿಗೆ ಅವಕಾಶ ನೀಡಲಾಗಿದೆ. ಆದರೆ ಜನರು ಗುಂಪು ಸೇರುವ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ

ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕಲಬುರಗಿ, ಬೀದರ್ ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 50ರಷ್ಟು ಪ್ರೇಕ್ಷಕರಿಗೆ ಅವಕಾಶ.

8 ಜಿಲ್ಲೆಯ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ನಲ್ಲಿ ಶೇ 50ರಷ್ಟು ಜನರು ಸೇರಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಪಾಲನೆ ಕಡ್ಡಾಯಗೊಳಿಸಲಾಗಿದೆ.

ಸಾರ್ವಜನಿಕ ಸಾರಿಗೆಗಳಲ್ಲಿ ಸೀಟಿಂಗ್ ಸಾಮರ್ಥ್ಯ ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕೂರಿಸುವಂತಿಲ್ಲ. ಜಾತ್ರೆ/ ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಜನ ಗುಂಪು ಸೇರುವಂತಿಲ್ಲ.

Comments are closed.