ಕೊರೊನಾ ಸೋಂಕಿತರು ಮನೆಯಿಂದ ಹೊರಬಂದ್ರೆ ಕ್ರಿಮಿನಲ್ ಕೇಸ್ : ಉಡುಪಿ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್

ಉಡುಪಿ : ಕೊರೊನಾ ಸೋಂಕಿತರು ಮನೆಯಿಂದ ಹೊರ ಬಂದ್ರೆ ಅಂತಹವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿ ಮನೆಯಲ್ಲಿ ಯೇ ಐಸೋಲೇಟ್ ಆದವರು ಹೊರಗಡೆ ಸುತ್ತಾಡುತ್ತಿದ್ದಾರೆ ಅನ್ನುವ ದೂರುಗಳು ಕೇಳಿಬರುತ್ತಿದೆ. ಈ ಹಿನ್ನೆಲೆ ಮನೆಯಿಂದ ಹೊರಗೆ ಬರುವ ಕೊರೊನಾ ಸೋಂಕಿತರ ವಿರುದ್ದ ಕ್ರಮ ಕಮಕೈಗೊಳ್ಳುತ್ತೇವೆ ಎಂದಿದ್ದಾರೆ‌.

ಜಿಲ್ಲೆಯಲ್ಲಿ ನಿತ್ಯವೂ 1000 ರಿಂದ 1200 ಪ್ರಕರಣ ದಾಖಲಾಗುತ್ತಿದೆ. ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು ಐಸೋಲೇಷನ್ ಆಗಲು ಸಮಸ್ಯೆ ಇರುವ ಕೊರೊನಾ ಸೋಂಕಿತರು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ ಎಂದಿದ್ದಾರೆ‌.

https://kannada.newsnext.live/covid-19-corona-telngana-hydrabad-tree-isolation-effect/amp/

ಕೊರೊನಾ ವೈರಸ್ ಸೋಂಕಿನ ವಿಚಾರದಲ್ಲಿ ಜನತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲೇ ಬೇಕು. ಅಲ್ಲದೇ ಕೋವಿಡ್ ಕೇರ್ ಸೆಂಟರ್ ಸದುಪಯೋಗ ಪಡಿಸಿಕೊಳ್ಳುವಂತೆ ಎಂದು ಮನವಿ ಮಾಡಿದ್ದಾರೆ.

Comments are closed.