ಉಡುಪಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಮನವಿ ಮಾಡಿದ್ದಾರೆ.
ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರಿಗೆ ಕಡ್ಡಾಯ ಕೋವಿಡ್ ರಿಪೋರ್ಟ್ ಕಡ್ಡಾಯವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಹಾಗಾಗಿ ಬೆಂಗಳೂರಿನಿಂದ ಜಿಲ್ಲೆಗೆ ಬರುವರು ಕುಟುಂಬಸ್ಥರು ಹಾಗೂ ಜಿಲ್ಲೆಯ ಜನತೆಯ ಹಿತದೃಷ್ಟಿಯಿಂದ ಟೆಸ್ಟ್ ಮಾಡಿಸಿಕೊಳ್ಳಿ ಎಂದಿದ್ದಾರೆ.
ಜಿಲ್ಲೆಯಲ್ಲಿ ಪ್ರತಿದಿನ 3000 ಕೊರೊನಾ ಟೆಸ್ಟ್ ಮಾಡುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಐಸಿಯು ಗಳ ಕೊರತೆಯಿಲ್ಲ, ವೆಂಟಿಲೇಟರ್- ಆಕ್ಸಿಜನ್ ವ್ಯವಸ್ಥೆ ಕೂಡ ಪರಿಪೂರ್ಣವಾಗಿದೆ. ಆದರೆ ಜಿಲ್ಲೆಯ ಜನ ಮೈಮರೆಯಬಾರದು, ಸಾರ್ವಜನಿಕ ಕಾರ್ಯಕ್ರಮ ಗಳಲ್ಲಿ ಭಾಗಿಯಾಗುವುದನ್ನು ಆದಷ್ಟು ಕಡಿಮೆ ಮಾಡಿ. ಜನ ಸೇರುವ ಸ್ಥಳಗಳಿಗೆ ಹೋಗಬೇಡಿ ಎಂದು ಮನವಿ ಮಾಡಿದರು.