ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 790 ಮಂದಿಗೆ ಸೋಂಕು : ತಗ್ಗುತ್ತಿಲ್ಲ ಕೊರೊನಾ ಅಬ್ಬರ, 10 ಮಂದಿ ಬಲಿ

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಅಬ್ಬರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗುತ್ತಿಲ್ಲ. ಕಳೆದ 24 ಗಂಟೆಯ ಅವಧಿಯಲ್ಲಿ ಬರೋಬ್ಬರಿ 790 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಯಾಗದ ಹಿನ್ನೆಲೆಯಲ್ಲಿ ಕೊರೊನಾ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ನಿನ್ನೆ 600ಕ್ಕೂ ಅಧಿಕ ಸೋಂಕು ತಗ್ಗಿದ್ದರೆ, ಇಂದು 790 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 85665ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು 6584 ಸಕ್ರೀಯ ಪ್ರಕರಣಗಳಿವೆ. ರಾಜ್ಯದಲ್ಲಿ ಇಂದು ಬೆಂಗಳೂರು, ಮೈಸೂರು ನಂತರದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲಾಗಿದೆ. ಇನ್ನು ಜಿಲ್ಲೆಯಲ್ಲಿ ಒಟ್ಟು 10 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 996 ಮಂದಿಯನ್ನು ಕೊರೊನಾ ಹೆಮ್ಮಾರಿ ಬಲಿ ಪಡೆದಿದೆ.

ರಾಜ್ಯದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳನ್ನು ಹೊಂದಿರುವ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆ ಮೂರನೇ ಸ್ಥಾನ ದಲ್ಲಿದೆ. ಕೊರೊ‌ನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ ಕೂಡ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ.

Comments are closed.