ಮಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದ್ದು, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೊರೊನಾ ಸೋಂಕು ಮಿತಿಮೀರಿದೆ. ಈ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದ ತರಗತಿಗಳನ್ನು ಎಪ್ರಿಲ್ 3ರ ವರೆಗೆ ಬಂದ್ ಮಾಡಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿನ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿತ್ತು. ಈ ಹೀಗಾಗಿ ಮಾರ್ಚ್ 29ರ ವರೆಗೆ ತರಗತಿಗನ್ನು ಬಂದ್ ಮಾಡಲಾಗಿತ್ತು. ಆದರೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ 5 ದಿನಗಳ ಕಾಲ ಮುಂದುವರಿಸಲಾಗಿದೆ.
ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಮನೆಗಳಿಗೆ ತೆರಳದಂತೆ ಸೂಚನೆಯನ್ನು ನೀಡಲಾಗಿದೆ.