ಉಡುಪಿ : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುತ್ತಿದೆ. ಹೊರ ರಾಜ್ಯದಿಂದ ಬರುವವರ ಮೇಲೆ ನಿಗಾ ಇರಿಸುವ ಸಲುವಾಗಿ ಜಿಲ್ಲೆಯ ಗಡಿಭಾಗಗಳಲ್ಲಿ ೧೦ ಕಡೆಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.
ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲೆಯ ೧೦ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಹೊರ ರಾಜ್ಯಗಳಿಂದ ಬರುವವರನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗುತ್ತಿದೆ.
ಚೆಕ್‌ಪೋಸ್ಟ್‌ಗಳಲ್ಲಿ ಪ್ರಮುಖವಾಗಿ ಹೊರ ರಾಜ್ಯದಿಂದ ಬರುವವರಲ್ಲಿ ಕೊರೊನಾ ನೆಗೆಟಿವ್ ವರದಿ ಇದೆಯಾ, ವ್ಯಾಕ್ಸಿನ್ ಪಡೆದಿದ್ದಾರೆಯೇ ಅನ್ನೋ ಬಗ್ಗೆ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಗಡಿ ಭಾಗದಲ್ಲಿ ಪ್ಲೈಯಿಂಗ್ ಸ್ಕ್ಯಾಡ್ ಇಡೀ ದಿನ ಕಾರ್ಯನಿರ್ವಹಿಸುತ್ತಿದ್ದು, ಮಾಸ್ಕ್ ಹಾಕದವರ ವಿರುದ್ದ ದಂಡ ಪ್ರಯೋಗ ಮಾಡಲಾಗುತ್ತಿದೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಮಾಸ್ಕ್ ಧರಿಸದವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುತ್ತಿದೆ. ಮಾಸ್ಕ್ ಧರಿಸದ ಕಾರಣ ಸುಮಾರು 31000 ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮ, ಸಮಾರಂಭಗಳ ಮೇಲೂ ಕೂಡ ನಿಗಾ ಇರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.