ಉಡುಪಿ 471, ದ.ಕ. 401 : ಕರಾವಳಿಯಲ್ಲಿ ಕೊರೊನಾ ಸ್ಪೋಟ ..!!

ಮಂಗಳೂರು/ಉಡುಪಿ : ಕರಾವಳಿಗೆ ಕೊರೊನಾ ಬಿಗ್ ಶಾಕ್ ಕೊಟ್ಟಿದೆ. ಉಡುಪಿ ಜಿಲ್ಲೆಯಲ್ಲಿ 471 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 401 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಅಲೆ ಕಾಣಿಸಿಕೊಂಡ ನಂತರದಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ಕೊರೊನಾ ಸ್ಪೋಟ ಸಂಭವಿಸಿದೆ. ಉಡುಪಿ ಜಿಲ್ಲೆಯಲ್ಲಿ 1,085 ಸಕ್ರೀಯ ಪ್ರಕರಣ ಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,475 ಮಂದಿಗೆ ಸೋಂಕು ದೃಢಪಟ್ಟಿದೆ.

ಕೊರೊನಾ ಸೋಂಕು ಕರಾವಳಿಯಲ್ಲಿ ಆತಂಕ ಮೂಡಿಸಿದೆ. ಇಷ್ಟು ದಿನ ಬೆಂಗಳೂರಲ್ಲಿ ಕಾಣಿಸಿ ಕೊಳ್ಳುತ್ತಿದ್ದ ಕೊರೊನಾ ಸೋಂಕು ಕರಾವಳಿಯಲ್ಲಿ ಆರ್ಭಟಿಸಿದ್ದು, ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿವೆ.

Comments are closed.