ಉಡುಪಿ : ಕೊರೊನಾ ವೈರಸ್ ಭೀತಿ, ನೇಣು ಬಿಗಿದು ಯುವಕ ಆತ್ಮಹತ್ಯೆ

ಉಡುಪಿ : ದೇಶದಾದ್ಯಂತ ಕೊರೊನಾ ಸೋಂಕಿತ ಪ್ರಕರಣ‌ ಹೆಚ್ಚುತ್ತಿದೆ. ಕೊರೊನಾ ಸೋಂಕಿನ ಭೀತಿಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ನಗರದ ಕೆಳಾರ್ಕಳ ಬೆಟ್ಟು ನಿವಾಸಿ ಪ್ರಸನ್ನ ಡಿ.‌ ಅಲ್ಮೆಡಾ (26 ವರ್ಷ) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕನ ಅಣ್ಣ ದೆಹಲಿಯಲ್ಲಿ ಉದ್ಯೋಗದಲ್ಲಿದ್ದು ಕೊರೊನಾ ಸೋಂಕು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಹೋಗಿದ್ದ.

ಯುವಕ ಹಲವು ಸಮಯಗಳಿಂದಲೂ ಮಾನಸಿಕ ಖಿನ್ನತೆಗೆ ಒಳಗಾಗಿ ದ್ದ ಎನ್ನಲಾಗುತ್ತಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Comments are closed.