ಕೋವಿಡ್ ನಿಯಮ ಉಲ್ಲಂಘನೆ : ಮಂಗಳೂರಿನ ಪ್ರತಿಷ್ಠಿತ ಶಿಕ್ಷಣ‌ ಸಂಸ್ಥೆಯ ಮುಖ್ಯಸ್ಥ, ಆಡಳಿತ ಮಂಡಳಿ ವಿರುದ್ದ ದೂರು

ಮಂಗಳೂರು : ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪ ದ ಹಿನ್ನೆಲೆಯಲ್ಲಿ ಮಂಗಳೂರಿನ ವಳಚ್ಚಿಲ್ ನಲ್ಲಿರುವ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹಾಗೂ ಆಡಳಿತ ಮಂಡಳಿಯ ವಿರುದ್ದ ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಕ್ಸ್ ಪರ್ಟ್ ವಿದ್ಯಾಸಂಸ್ಥೆಯಲ್ಲಿ ಕೋವಿಡ್ ನಿಯಮ‌ ಉಲ್ಲಂಘಿಸಿರು ವುದು ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾಸಂಸ್ಥೆಯಲ್ಲಿ 30 ವಿದ್ಯಾರ್ಥಿ ಗಳನ್ನು ಕಾಲೇಜಿ ನಲ್ಲಿ ಇರಿಸಿಕೊಂಡು ಶೈಕ್ಷಣಿಕ ಚಟುವಟಿಕೆ ನಡೆಸಲಾ ಗಿದೆ. ವಿದ್ಯಾರ್ಥಿಗಳನ್ನು ಪೋಷಕರು ಕರೆದೊಯ್ಯಲು ಬಂದಾಗಲೂ ಕಳುಹಿಸಿಕೊಟ್ಟಿರಲಿಲ್ಲ.

ರಾಜ್ಯದಲ್ಲಿ ಕೊರೊನಾ ಸೋಂಕನ್ನು ತಡೆಯಲು ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲಾಗಿದೆ. ಆದರೆ ಶಿಕ್ಷಣ‌ ಸಂಸ್ಥೆ ಶೈಕ್ಷಣಿಕ ಚಟುವಟಿಕೆ ನಡೆಸುವ ಮೂಲಕ ಕೊರೊನಾ ಸೋಂಕು ಹರಡಲು ಕಾರಣರಾಗಿ ದ್ದಾರೆ.

ಈ ಹಿನ್ನೆಲೆಯಲ್ಲಿ ಎಕ್ಸ್ ಪರ್ಟ್ ವಿದ್ಯಾಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್‌ ಹಾಗೂ ಆಡಳಿತ ಮಂಡಳಿಯ ವಿರುದ್ದ ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ‌ ಪೊಲೀಸರು ಪ್ರಕರಣ ದಾಖಲು ಮಾಡಿ ಕೊಂಡಿದ್ದಾರೆ.

Comments are closed.